ವೆಸ್ಟ್ ಇಂಡೀಸ್ ಗೆ ಟೀಂ ಇಂಡಿಯಾ ಪ್ರಕಟ: ಶಿಖರ್ ಧವನ್ ಗೆ ಖೋಕ್, ಮಯಾಂಕ್ ಅಗರ್ವಾಲ್ ಗೆ ಸ್ಥಾನ
ನವದೆಹಲಿ: ವೆಸ್ಟ್ ಇಂಡೀಸ್ -ಭಾರತ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಏಷ್ಯಾ ಕಪ್ ನಲ್ಲಿ ವಿಶ್ರಾಂತಿ ಪಡೆದಿದ್ದ ಕೋಹ್ಲಿಯನ್ನು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಸೇರ್ಪಡೆಗೊಳಿಸಲಾಗಿದ್ದು, ಟೆಸ್ತ್ ಸರಣಿಗೆ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.
ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದರೆ, ಇಶಾಂತ್ ಶರ್ಮಾ, ಹಾರ್ದಿಕ್ ಪಾಂಡ್ಯ ಗಾಯದಿಂದ ಇನ್ನೂ ಚೇತರಿಕೆ ಕಾಣಬೇಕಿದ್ದು, ಟೆಸ್ಟ್ ಪಂದ್ಯಗಳಿಂದ ಕೈ ಬಿಡಲಾಗಿದೆ. ಇನ್ನು ಇಂಗ್ಲೆಂಡ್ ಟೆಸ್ಟ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ಶಿಖರ್ ಧವನ್ ಅವರೊಂದಿಗೆ ಮುರಳಿ ವಿಜಯ್, ದಿನೇಶ್ ಕಾರ್ತಿಕ್, ಕರುಣ್ ನಾಯರ್ ನ್ನೂ ತಂಡದಿಂದ ಕೈಬಿಡಲಾಗಿದೆ.
ಈ ನಡುವೆ ದೇಶಿಯ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಮಯಾಂಕ್ ಅಗರ್ವಾಲ್ ನ್ನು ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದ್ದು, ಮೊಹಮ್ಮದ್ ಸಿರಾಜ್, ಮಯಾಂಕ್ ಅಗರ್ವಾಲ್ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ.
ಭಾರತೀಯ ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರೆಹಾನೆ (ಉಪನಾಯಕ) ಹನುಮ ವಿಹಾರಿ, ರಿಷಭ್ ಪಂತ್( ವಿಕೆಟ್ ಕೀಪರ್) ಆರ್ ಅಶ್ವಿನ್, ರವೀಂಡ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics