ಮೊಹಾಲಿ: ಸ್ಯಾಮ್ ಕರನ್ ಅವರ ಹ್ಯಾಟ್ರಿಕ್ ವಿಕೆಟ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ಮೊಹಾಲಿಯಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 166 ರನ್ ಕಲೆ ಹಾಕಿತ್ತು.
ಗೆಲುವಿಗೆ 167 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ತಂಡವನ್ನು ನಾಲ್ಕು ಎಸೆತಗಳು ಬಾಕಿ ಇರುವಂತೆಯೇ 152 ರನ್‌ಗಳಿಗೆ ಕಟ್ಟಿಹಾಕುವ ಮೂಲಕ ಪಂಜಾಬ್ ಐಪಿಎಲ್ 12ನೇ ಆವೃತ್ತಿಯಲ್ಲಿ ಮೂರನೇ ಗೆಲುವು ದಾಖಲಿಸಿತು.
ಪಂಜಾಬ್ ಆರಂಭದಲ್ಲೇ ಕೆ ಎಲ್ ರಾಹುಲ್(15)ವಿಕೆಟ್ ಕಳೆದುಕೊಂಡಿತು. ಸ್ಯಾಮ್ ಕರನ್ ಆರ್ಭಟ 20 ರನ್ಗೆ ನಿಂತರೆ, ಬರವಸೆಯ ಆಟಗಾರ ಮಯಾಂಕ್ ಅಗರ್ವಾಲ್ 6 ರನ್ ಗಳಿಸಿರುವಾಗ ಅನಗತ್ಯ ರನ್ ಕಲೆಹಾಕಲೋಗಿ ರನೌಟ್ಗೆ ಬಲಿಯಾದರು.
144ಕ್ಕೆ 4 ವಿಕೆಟ್ ಕಳೆದುಕೊಂಡು ಜಯದ ಸನಿಹದಲ್ಲಿದ್ದ ಡೆಲ್ಲಿ, ಅಂತಿಮ 8 ರನ್ ಕಲೆಹಾಕುವಷ್ಟರಲ್ಲಿ ನಾಟಕೀಯವಾಗಿ ಆರು ವಿಕೆಟ್ ಕಳೆದುಕೊಂಡು ಸೋಲಿಗೊಳಗಾಯಿತು. ಕರನ್ ಅಲ್ಲದೆ, ಅಶ್ವಿನ್ ಮತ್ತು ಮೊಹಮ್ಮದ್ ಶಮಿ ತಲಾ 2 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics