ಜೈಪುರ: ಮಂಗಳವಾರದ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಡಿವಿಲಿಯರ್ಸ್ ವಿಕೆಟ್ ಪಡೆದಿದ್ದು ನನ್ನ ಕ್ರಿಕೆಟ್ ವೃತ್ತಿ ಬದುಕಿನ ಅವಿಸ್ಮರಣೀಯ ಕ್ಷಣ ಎಂದು ರಾಜಸ್ತಾನ ರಾಯಲ್ಸ್‌ನ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಹೇಳಿದ್ದಾರೆ.
ಲೆಗ್ ಸ್ಪಿನ್ನರ್ 12ರನ್‌ಗೆ 3 ವಿಕೆಟ್ ಕಬಳಿಸಿ ಆರ್‌ಆರ್ ಜಯದಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಪವರ್ ಪ್ಲೆ ಬಳಿಕ ಕಣಕ್ಕಿಳಿದ ಶ್ರೇಯಸ್, ಕೊಹ್ಲಿ ಮತ್ತು ಡಿವಿಲಿಯರ್ಸ್ ವಿಕೆಟ್ ಅನ್ನು ಒಬ್ಬರ ಹಿಂದೆ ಒಬ್ಬರಂತೆ ಪಡೆದು ರಾಜಸ್ತಾನದ ಗೆಲುವನ್ನು ಖಚಿತಗೊಳಿಸಿದ್ದರು.
‘ಒಂದೇ ಪಂದ್ಯದಲ್ಲಿ ಕೊಹ್ಲಿ, ಡಿವಿಲಿಯರ್ಸ್ ವಿಕೆಟ್ ಪಡೆಯುವುದು ಪ್ರತಿಯೊಬ್ಬ ಯುವ ಆಟಗಾರನ ಕನಸು. ಇದು ನನ್ನ ಕ್ರಿಕೆಟ್ ವೃತ್ತಿಯ ಮತ್ತು ಐಪಿಎಲ್ ಕ್ರಿಕೆಟ್ ಒಂದು ಅತ್ಯಂತ ಅವಿಸ್ಮರಣೀಯ ಕ್ಷಣ’ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos