ದೀಪಕ್ ಚಹಾರ್ 
ಕ್ರಿಕೆಟ್

ಐಪಿಎಲ್‌ ಕ್ರಿಕೆಟ್ ಇತಿಹಾಸದಲ್ಲೇ ವಿಶೇಷ ದಾಖಲೆ ಸೃಷ್ಟಿಸಿದ ವೇಗಿ ದೀಪಕ್‌ ಚಹಾರ್‌!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ದೀಪಕ್ ಚಹಾರ್ ಅವರು ಅತಿ ಹೆಚ್ಚು ಡಾಟ್ ಬಾಲ್ ಗಳನ್ನು ಮಾಡುವ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ನೂತನ ದಾಖಲೆ ಮಾಡಿದ್ದಾರೆ.

ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ದೀಪಕ್ ಚಹಾರ್ ಅವರು ಅತಿ ಹೆಚ್ಚು ಡಾಟ್ ಬಾಲ್ ಗಳನ್ನು ಮಾಡುವ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ನೂತನ ದಾಖಲೆ ಮಾಡಿದ್ದಾರೆ.  
ಬಲಗೈ ವೇಗದ ಬೌಲರ್ ದೀಪಕ್ ಚಹಾರ್, ಮಂಗಳವಾರ ರಾತ್ರಿ ಕೊಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 20 ಡಾಟ್ ಬಾಲ್ ಗಳನ್ನು ಮಾಡಿದ್ದಾರೆ. ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಡಾಟ್ ಬಾಲ್ ಮಾಡಿದ ಮೊದಲ ಬೌಲರ್ ಎಂಬ ಸಾಧನಗೆ ಚಹಾರ್ ಭಾಜನರಾದರು.
ರಾಹುಲ್ ಚಹಾರ್ ರಾತ್ರಿ ನಡೆದ ಪಂದ್ಯದಲ್ಲಿ ಕ್ರಿಸ್ ಲೀನ್(0), ರಾಬಿನ್ ಉತ್ತಪ್ಪ(6) ಹಾಗೂ ನಿತೀಶ್ ರಾಣಾ(0) ಅವರ ವಿಕೆಟ್‌ಗಳನ್ನು ಬಹುಬೇಗ ಕೆಡವಿ ಕೆಕೆಆರ್ ಕಡಿಮೆ ಮೊತ್ತಕ್ಕೆ ಆಲ್ ಔಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೇ, 19ನೇ ಓವರ್‌ನಲ್ಲಿ 5 ಚುಕ್ಕಿ ಎಸೆತಗಳನ್ನು ಮಾಡಿದ್ದರು. ಇವರ ಶಿಸ್ತಿನ ದಾಳಿಯ ನೆರವಿನಿಂದ ಕೊಲ್ಕತಾ ನೈಟ್ ರೈಡರ್ಸ್ 108 ರನ್‌ಗಳಿಗೆ ಸೀಮಿತವಾಗಿತ್ತು. 
ಸುಲಭ ಗುರಿ ಮುಟ್ಟಲು ಸಿಎಸ್‌ಕೆ ಕೂಡ ಪರದಾಡಿತ್ತು. 18ನೇ ಓವರ್‌ನಲ್ಲಿ ಇನ್ನೂ 16 ಎಸೆತಗಳು ಬಾಕಿ ಇರುವಂತೆ ಚೆನ್ನೈ ಗುರಿ ಮುಟ್ಟಿ ಗೆಲುವು ಪಡೆದಿತ್ತು. ಈ ಪಂದ್ಯದ ಗೆಲುವಿನೊಂದಿಗೆ ಚೆನ್ನೈ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿತು. ಚೆನ್ನೈ ನಾಳೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಜೈಪುರದಲ್ಲಿ ಸೆಣಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT