ಸಂಗ್ರಹ ಚಿತ್ರ 
ಕ್ರಿಕೆಟ್

ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ, ಆರ್ ಸಿಬಿ ನಾಯಕ ಈಗ ಟಿ20ಯ ಸಾಮ್ರಾಟ!

ಸತತ 6 ಪಂದ್ಯಗಳ ಬಳಿಕ 7ನೇ ಪಂದ್ಯದಲ್ಲಿ ಆರ್ ಸಿಬಿ ಗೆಲುವು ಸಾಧಿಸಿದ್ದು, ಚೊಚ್ಚಲ ಗೆಲುವು ಸಾಧಿಸಿದ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ಬರೆದಿದ್ದಾರೆ.

ಮೊಹಾಲಿ: ಸತತ 6 ಪಂದ್ಯಗಳ ಬಳಿಕ 7ನೇ ಪಂದ್ಯದಲ್ಲಿ ಆರ್ ಸಿಬಿ ಗೆಲುವು ಸಾಧಿಸಿದ್ದು, ಚೊಚ್ಚಲ ಗೆಲುವು ಸಾಧಿಸಿದ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ಬರೆದಿದ್ದಾರೆ.
ಹೌದು.. ನಿನ್ನೆ ಪಂಜಾಬ್ ವಿರುದ್ಧದ ಪಂದ್ಯ ಅಮೋಘ ಅರ್ಧಶತಕ ಗಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ವಿರಾಟ್ ಕೊಹ್ಲಿ (67 ರನ್) ಇದೇ ಪಂದ್ಯದಲ್ಲಿ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದಾರೆ. ನಿನ್ನೆಪಂದ್ಯದಲ್ಲಿ ತಮ್ಮ ಖಾತೆಗೆ 67 ರನ್ ಗಳನ್ನು ಸೇರಿಸಿಕೊಂಡ ಕೊಹ್ಲಿ, ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ವಿಶ್ವದ 6ನೇ ಮತ್ತು ಭಾರತದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಐಪಿಎಲ್ ನಲ್ಲಿ ಆರ್ ಸಿಬಿ ಸೇರಿದಂತೆ ದೆಹಲಿ, ಟೀಂ ಇಂಡಿಯಾ ತಂಡಗಳ ಪರ ವಿರಾಟ್ ಕೊಹ್ಲಿ ಬರೊಬ್ಬರಿ 8175 ರನ್ ಪೇರಿಸಿದ್ದಾರೆ. ಇನ್ನು ಐಪಿಎಲ್ ಒಂದರಲ್ಲೇ ಕೊಹ್ಲಿ 5218 ರನ್ ಗಳಿಸಿರುವುದು ವಿಶೇಷ. ಆ ಮೂಲಕ ವಿರಾಟ್ ಕೊಹ್ಲಿ ಟಿ20ಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಇನ್ನು ಐಪಿಎಲ್ 5 ಸಾವಿರ ರನ್ ಪೂರೈಸಿದ ಆಟಗಾರರಲ್ಲಿ ಕೊಹ್ಲಿ ಮತ್ತು ಸುರೇಶ್ ರೈನಾ ಮಾತ್ರ ಇದ್ದಾರೆ.
ವಿರಾಟ್ ಕೊಹ್ಲಿ ತೀವ್ರ ಪೈಪೋಟಿ ನೀಡುತ್ತಿರುವ ಸುರೇಶ್ ರೈನಾ 309 ಪಂದ್ಯಗಳಿಂದ 293 ಇನ್ನಿಂಗ್ಸ್ ಗಳಲ್ಲಿ 8145 ರನ್ ಗಳಿಸಿದ್ದಾರೆ. ಆ ಮೂಲಕ ಟಿ20ಯಲ್ಲಿ ಗರಿಷ್ಠ ರನ್ ಗಳಿಸಿದ 2ನೇ ಆಟಗಾರರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!