ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ 
ಕ್ರಿಕೆಟ್

ಕಡೆಗೂ ಗೆಲುವಿನ ಖಾತೆ ತೆರೆದ ಆರ್ ಸಿಬಿ, ಪಂಜಾಬ್ ವಿರುದ್ಧ ಎಂಟು ವಿಕೆಟ್ ಗಳ ಭರ್ಜರಿ ಜಯ

ಐಪಿಎಲ್ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಡೆಗೂ ಗೆಲುವಿನ ಖಾತೆ ತೆರೆದಿದೆ.ಮೊಹಾಲಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಎಂಟು ವಿಕೆಟ್ ಗಳ ಅಂತರದ ಭರ್ಜರಿ ಜಯ ದಾಖಲಿಸಿದೆ.

ಮೊಹಾಲಿ: ಐಪಿಎಲ್ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಡೆಗೂ ಗೆಲುವಿನ ಖಾತೆ ತೆರೆದಿದೆ.ಮೊಹಾಲಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ   ನಡೆದ ಪಂದ್ಯದಲ್ಲಿ ಎಂಟು ವಿಕೆಟ್ ಗಳ ಅಂತರದ ಭರ್ಜರಿ  ಜಯ ದಾಖಲಿಸಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ಕ್ರೀಸ್ ಗೇಲ್ (99) ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ 173 ರನ್ ಗಳನ್ನು ಪೇರಿಸಿತ್ತು. ನಂತರ ಈ ಗುರಿ ಬೆನ್ನಟ್ಟಿದ್ದ ಆರ್ ಸಿಬಿ ಪರ ನಾಯಕ ವಿರಾಟ್ ಕೊಹ್ಲಿ ಹಾಗೂ ಪಾರ್ಥಿವ್ ಪಟೇಲ್ ಉತ್ತಮ ಆರಂಭ ಒದಗಿಸಿದರು. ಇವರಿಬ್ಬರು ಮೊದಲ ವಿಕೆಟ್ ಗೆ 3. 5 ಓವರ್ ಗಳಲ್ಲಿ 43 ರನ್ ಗಳಿಸಿದರು.

 ಈ ಹಂತದಲ್ಲಿ ಆರ್ ಅಶ್ವಿನ್ ದಾಳಿಯಲ್ಲಿ ಪಾರ್ಥಿವ್ ವಿಕೆಟ್ ಒಪ್ಪಿಸಿದ್ದರು. ಬಳಿಕ ಜೊತೆಯಾದ ಎಬಿ ಡಿವಿಲಿಯರ್ಸ್  ಎಚ್ಚರಿಕೆಯಿಂದ ತಂಡವನ್ನು ಮುನ್ನಡೆಸಿದರು. ಆದರೆ, 33 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ವಿರಾಟ್ ಕೊಹ್ಲಿ  67 ರನ್ ಗಳಿಸಿ ಔಟಾದರು.
ನಂತರ ವಿಲಿಯರ್ಸ್  35 ಎಸೆತಗಳಲ್ಲಿ ಅರ್ಧ ಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನತ್ತ ಸಾಗಿಸಿದರು. ಇವರಿಗೆ ಮಾರ್ಕಸ್ ಸ್ಟೋಯ್ನಿಸ್ ಅವರ ಉತ್ತಮ ಬೆಂಬಲ ದೊರಕಿತು. ಇದರಿಂದಾಗಿ ಇನ್ನು ನಾಲ್ಕು ಎಸೆತಗಳು ಬಾಕಿ ಉಳಿದಿರುವಂತೆಯೇ 19.2 ಓವರ್ ನಲ್ಲಿ ಎರಡು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಆರ್ ಸಿಬಿ ಗೆಲುವು ಸಾಧಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!