ನವದೆಹಲಿ: ಐಪಿಎಲ್ ಪಂಜಾಬ್ ತಂಡದ ನಾಯಕ ಆರ್. ಅಶ್ವಿನ್ ಗೆ 12 ಲಕ್ಷ ದಂಡ ವಿಧಿಸಲಾಗಿದೆ.
ನಿಧಾನಗತಿಯ ಓವರ್ ಮಾಡಿದ್ದಕ್ಕಾಗಿ ಆರ್.ಅಶ್ವಿನ್ ಗೆ ದಂಡ ವಿಧಿಸಲಾಗಿದೆ.
"ದೆಹಲಿ ವಿರುದ್ಧದ ಪಂದ್ಯದಲ್ಲಿ ಆರ್ ಅಶ್ವಿನ್ ನಿಧಾನಗತಿಯ ಓವರ್ ಮಾಡಿದ್ದರು. ಈ ಸೀಸನ್ ಐಪಿಎಲ್ ನಲ್ಲಿ ಪಂಜಾಬ್ ತಂಡ ಮೊದಲ ಬಾರಿಗೆ ಐಪಿಎಲ್ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಅಶ್ವಿನ್ ಗೆ 12 ಲಕ್ಷ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೊದಲು ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ, ರಾಜಸ್ಥಾನ್ ರಾಯಲ್ಸ್ ನಾಯಕ ಅಜಿಂಕ್ಯಾ ರೆಹಾನೆ ಮತ್ತು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ದಂಡದ ಶಿಕ್ಷೆಗೊಳಗಾಗಿದ್ದರು.