ಸಂಗ್ರಹ ಚಿತ್ರ 
ಕ್ರಿಕೆಟ್

ಐಪಿಎಲ್ 2019: ಕೋಲ್ಕತ್ತಾ ವಿರುದ್ಧ ಗೆದ್ದ ರಾಜಸ್ಥಾನ್, ಆರ್‌ಸಿಬಿ ಫ್ಲೇ ಆಫ್ ಕನಸಿಗೆ ತೊಡಕು?

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಗೆದ್ದುಕೊಂಡಿದ್ದು ಈ ಮೂಲಕ ಆರ್‌ಸಿಬಿ ಫ್ಲೇ ಆಫ್ ಕನಸಿಗೆ ತೊಡಕುಂಟು ಮಾಡಲಿದೆ.

ಕೋಲ್ಕತ್ತಾ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಗೆದ್ದುಕೊಂಡಿದ್ದು ಈ ಮೂಲಕ ಆರ್‌ಸಿಬಿ ಫ್ಲೇ ಆಫ್ ಕನಸಿಗೆ ತೊಡಕುಂಟು ಮಾಡಲಿದೆ.
ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ತಂಡ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 175 ರನ್ ಪೇರಿಸಿತ್ತು. 176 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ ತಂಡ ಇನ್ನು 4 ಎಸೆತ ಬಾಕಿ ಇರುವಂತೆ 7 ವಿಕೆಟ್ ನಷ್ಟಕ್ಕೆ 177 ರನ್ ಪೇರಿಸುವ ಮೂಲಕ ಗೆಲುವಿನ ನಗೆ ಬೀರಿತು. 
ಕೋಲ್ಕತ್ತಾ ಪರ ನಾಯಕ ದಿನೇಶ್ ಕಾರ್ತಿಕ್ ಅಜೇಯ 97, ರಾಣಾ 21, ಆ್ಯಂಡ್ರೂ ರಸೂಲ್ 14 ರನ್ ಪೇರಿಸಿದ್ದಾರೆ. 
ರಾಜಸ್ಥಾನ ಪರ ರಹಾನೆ 34, ಸ್ಯಾಮ್ಸನ್ 22, ಪರಾಗ್ 47 ಮತ್ತು ಆರ್ಚೆರ್ 27 ರನ್ ಪೇರಿಸಿದ್ದಾರೆ.
ಈ ಮೂಲಕ 11 ಪಂದ್ಯಗಳಲ್ಲಿ 4 ಪಂದ್ಯವನ್ನು ಗೆದ್ದು 8 ಅಂಕಗಳೊಂದಿಗೆ ರಾಜಸ್ಥಾನ 7ನೇ ಸ್ಥಾನದಲ್ಲಿದೆ. ಅದೇ ರೀತಿ ಆರ್ಸಿಬಿ ಸಹ 11 ಪಂದ್ಯಗಳಲ್ಲಿ 4 ಪಂದ್ಯ ಗೆದ್ದು 8 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ. ಒಟ್ಟಿನಲ್ಲಿ ಆರ್‌ಸಿಬಿ ಫ್ಲೇ ಆಫ್ ಹಂತಕ್ಕೆ ಹೋಗಬೇಕಾದರೂ ಇಳಿದಿರುವ ಮೂರು ಪಂದ್ಯಗಳನ್ನು ಗೆಲ್ಲಬೇಕಾಗಿರುವುದು ಅನಿವಾರ್ಯ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!