ಹಸೀನ್ ಜಹಾನ್-ಮೊಹಮ್ಮದ್ ಶಮಿ 
ಕ್ರಿಕೆಟ್

ಹೈಡ್ರಾಮಾ: ಕ್ರಿಕೆಟಿಗ ಮೊಹಮ್ಮದ್ ಶಮಿ ಪರಿತ್ಯಕ್ತ ಪತ್ನಿ ಹಸೀನ್ ಜಹಾನ್ ಬಂಧನ, ಬಿಡುಗಡೆ!

ಭಾರತ ತಂಡದ ಪ್ರಮುಖ ಆಟಗಾರ ಮೊಹ್ಮದ್ ಶಮಿ ಅವರ ಪರಿತ್ಯಕ್ತ ಪತ್ನಿ ಹಸಿನ್ ಜಹಾನ್ ಅವರನ್ನು ಇಂದು ನಾಟಕೀಯ ಬೆಳವಣಿಗೆಯೊಂದರಲ್ಲಿ ಬಂಧಿಸಿ ನಂತರ ಬಿಡುಗಡೆಗೊಳಿಸಲಾಗಿದೆ.

ಅಮ್ರೋಹ: ಭಾರತ ತಂಡದ ಪ್ರಮುಖ ಆಟಗಾರ ಮೊಹ್ಮದ್ ಶಮಿ ಅವರ ಪರಿತ್ಯಕ್ತ ಪತ್ನಿ ಹಸಿನ್ ಜಹಾನ್ ಅವರನ್ನು ಇಂದು ನಾಟಕೀಯ ಬೆಳವಣಿಗೆಯೊಂದರಲ್ಲಿ ಬಂಧಿಸಿ ನಂತರ ಬಿಡುಗಡೆಗೊಳಿಸಲಾಗಿದೆ.

ನಿನ್ನೆ ತಡರಾತ್ರಿ ಹಸಿನ್ ಜಹಾನ್ ಅವರು ಸಹಾಸಪುರ್ ಅಲಿನಗರ ಗ್ರಾಮದಲ್ಲಿರುವ ಶಮಿ ಮನೆಗೆ ಹೋಗಿ ಅವರ ತಾಯಿಯೊಂದಿಗೆ ವಾಗ್ವಾದ ನಡೆಸಿದ್ದು, ಅಲ್ಲಿಂದ ಹೊರಟುಹೋಗುವಂತೆ ಹೇಳಿದ ನಂತರ ಮಗುವಿನೊಂದಿಗೆ ಕೋಣೆಯ ಬಾಗಿಲು ಮುಚ್ಚಿಕೊಂಡಿದ್ದರು ಎನ್ನಲಾಗಿದೆ.

ನಂತರ ಪೊಲೀಸರಿಗೆ ಕರೆ ಮಾಡಲಾಯಿತಾದರೂ ಸ್ಥಿತಿಯನ್ನು ನಿಯಂತ್ರಿಸಲು ಅಧಿಕಾರಿಗಳು ವಿಫಲರಾಗಿ ಹಸಿನಾ ಅವರನ್ನು ವಶಕ್ಕೆ ಪಡೆದುಕೊಂಡು ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.

ಮಾರ್ಚ್ ತಿಂಗಳಲ್ಲಿ ಮೊಹ್ಮದ್ ಶಮಿ ಅವರ ವಿರುದ್ಧ ಐಪಿಸಿ 498ಎ ಪ್ರಕಾರ ವರದಕ್ಷಿಣೆ ಕಿರುಕುಳ ಹಾಗೂ 354ಎ ಪ್ರಕಾರ ಲೈಂಗಿಕ ಕಿರುಕುಳ ಆರೋಪದಡಿ ಕೊಲ್ಕತಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ