ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲೇ ಆಸ್ಟ್ರೇಲಿಯಾ ಪರ ಅಬ್ಬರಿಸಿರುವ ಮಾಜಿ ನಾಯಕ ಸ್ಟೀವ್ ಸ್ಮಿತ್ ಅಮೋಘ ಶತಕ ಸಿಡಿಸಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ದಾಖಲೆ ಪುಡಿಗಟ್ಟಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭರ್ಜರಿ 144 ರನ್ ಸಿಡಿಸಿ ಸ್ಮಿತ್ ತಮ್ಮ 24ನೇ ಟೆಸ್ಟ್ ಶತಕ ಪೂರೈಸಿದರು. ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 24ನೇ ಶತಕ ಸಿಡಿಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಪಾತ್ರರಾದರು. ಸ್ಮಿತ್ ತಮ್ಮ 24ನೇ ಶತಕಕ್ಕಾಗಿ ಒಟ್ಟು 118 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ.
ಇದಕ್ಕೂ ಮೊದಲು ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಅವರು ಕೇವಲ 66 ಇನ್ನಿಂಗ್ಸ್ ಗಳಲ್ಲಿ 24 ಶತಕ ಸಿಡಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದ್ದಾರೆ. ಇನ್ನು ಪಟ್ಟಿಯ ಮೂರನೇ ಸ್ಥಾನದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದ್ದು, ಕೊಹ್ಲಿ 24 ಶತಕಕ್ಕಾಗಿ 123 ಇನ್ನಿಂಗ್ಸ್ ತೆಗೆದುಕೊಂಡಿದ್ದು, ನಾಲ್ಕನೇ ಸ್ಥಾನದಲ್ಲಿರುವ ಸಚಿನ್ 125 ಇನ್ನಿಂಗ್ಸ್ ಗಳಲ್ಲಿ 24 ಶತಕ ಸಿಡಿಸಿದ್ದರು.
ಇನ್ನು ಆಸ್ಟ್ರೇಲಿಯಾ ತಂಡದ ಸ್ಟೀವನ್ ಸ್ಮಿತ್ ಅವರು ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ 219 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ 16 ಬೌಂಡರಿಯೊಂದಿಗೆ 144 ರನ್ ಗಳಿಸಿದರು. ಆ ಮೂಲಕ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್‌ನಲ್ಲಿ 80.4 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 284 ರನ್ ಕಲೆ ಹಾಕಿತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos