ಕ್ರಿಕೆಟ್

ಜಮ್ಮು ಮತ್ತು ಕಾಶ್ಮೀರ ಬಿಟ್ಟು ತೆರಳಿ: ಇರ್ಫಾನ್ ಪಠಾಣ್ ಸೇರಿದಂತೆ ಕ್ರಿಕೆಟಿಗರಿಗೆ ಭದ್ರತಾ ಎಚ್ಚರಿಕೆ

Srinivasamurthy VN
ಶ್ರೀನಗರ: ತತ್ ಕ್ಷಣವೇ ಜಮ್ಮು ಮತ್ತು ಕಾಶ್ಮೀರ ಬಿಟ್ಟು ತೆರಳುವಂತೆ ಕ್ರಿಕೆಟಿಗ ಇರ್ಫಾನ್ ಪಠಾಣ್ ಮತ್ತು ಇತರೆ 100 ಕ್ರಿಕೆಟಿಗರಿಗೆ ಸೂಚನೆ ನೀಡಲಾಗಿದೆ.
ಹೌದು.. ಈ ಕೂಡಲೇ ಜಮ್ಮ ಮತ್ತು ಕಾಶ್ಮೀರ ಬಿಟ್ಟು ತೆರಳುವಂತೆ ಟೀಂ ಇಂಡಿಯಾ ಕ್ರಿಕೆಟಿಗ ಇರ್ಫಾನ್ ಪಠಾಣ್ ಗೆ ಭಾರತೀಯ ಸೇನೆ ಸೂಚನೆ ನೀಡಿದೆ ಎನ್ನಲಾಗಿದೆ. ಪ್ರಸ್ತುತ ಕಾಶ್ಮೀರದಲ್ಲಿ ಪರಿಸ್ಥಿತಿ ಶಾಂತವಾಗಿಲ್ಲ. ಹೀಗಾಗಿ ಸೇನೆ  ಜಮ್ಮು ಮತ್ತು ಕಾಶ್ಮೀರ ರಣಜಿ ತಂಡದ ಆಟಗಾರ ಹಾಗೂ ಮೆಂಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇರ್ಫಾನ್ ಪಠಾಣ್‌ಗೆ  ಸೂಚನೆ ನೀಡಿದೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ದೇಶದ ಒಳಗೆ ಭಾರಿ ಪ್ರಮಾಣದ ವಿಧ್ವಂಸಕ ಕೃತ್ಯ ವೆಸಗಲು ಉಗ್ರರು ತುದಿಗಾಲಲ್ಲಿ ನಿಂತಿದ್ದು, ಈಗಾಗಲೇ ಹತ್ತಾರು ಉಗ್ರರು ಗಡಿದಾಟಿ ಒಳಗೆ ಪ್ರವೇಶ ಮಾಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಂತೆಯೇ ಕಾಶ್ಮೀರದಲ್ಲಿ ಈಗಾಗಲೇ ಹಲವು ಉಗ್ರರು ಅವಿತಿದ್ದು, ಅವರ ವಿರುದ್ಧ ಕಾರ್ಯಾಚರಣೆ ಕೂಡ ಚಾಲ್ತಿಯಲ್ಲಿದೆ. ಇದೇ ಕಾರಣಕ್ಕೆ ಕಣಿವೆ ರಾಜ್ಯದಲ್ಲಿರುವ ಪ್ರವಾಸಿಗರನ್ನು ವಾಪಾಸ್ ತೆರಳು ಸೂಚಿಸಿದೆ. ಅಮರನಾಥ ಯಾತ್ರಾರ್ಥಿಗಳಿಗೂ ಸೂಚನೆ ನೀಡಲಾಗಿದೆ. ಇದರ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ ರಣಜಿ ತಂಡಕ್ಕೂ ಸೂಚಿಸಲಾಗಿದೆ.
ಇರ್ಫಾನ್ ಪಠಾಣ, ಕೋಚ್, ಸಹಾಯಕ ಸಿಬ್ಬಂಧಿಗಳು ಹಾಗೂ ಆಟಗಾರರಿಗೆ ಕಾಶ್ಮೀರ ತೊರೆಯುವಂತೆ ಸೂಚನೆ ನೀಡಲಾಗಿದೆ. ತಕ್ಷಣವೇ ತಮ್ಮ ತಮ್ಮ ಮನೆಗಳಿಗೆ ತೆರಳುವಂತೆ ಸೇನೆ ಸೂಚಿಸಿದೆ. JKCA ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯ, ಅಭ್ಯಾಸ ಆಡದಂತೆ ಸೂಚಿಸಲಾಗಿದೆ. ಇಷ್ಟೇ ಅಲ್ಲ ಕ್ರೀಡಾಂಗಣದಲ್ಲೂ ಯಾರೂ ಉಳಿದಂತೆ ಸೂಚಿಸಲಾಗಿದೆ. ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಗೆ ಸೂಚನೆ ನೀಡಿದೆ. 
SCROLL FOR NEXT