ಕ್ರಿಕೆಟ್

73ನೇ ಸ್ವಾತಂತ್ರ್ಯ ದಿನಾಚರಣೆ: ದೇಶದ ಜನತೆಗೆ ಕ್ರಿಕೆಟಿಗರಿಂದ ಶುಭಾಶಯ

Srinivasamurthy VN

ನವದೆಹಲಿ: 73ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ದೇಶಾದ್ಯಂತ ಸಿದ್ಧತೆ ಪೂರ್ಣಗೊಂಡಿರುವ ಹೊತ್ತಿನಲ್ಲೇ ಭಾರತೀಯ ಕ್ರಿಕೆಟಿಗರೂ ಕೂಡ ದೇಶದ ಜನತೆಗೆ ಶುಭ ಕೋರಿದ್ದಾರೆ.

ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಕ್ರಿಕೆಟಿಗರು ದೇಶದ ಜನತೆಗೆ ವಿಡಿಯೋ ಮೂಲಕ ಶುಭ ಕೋರಿದ್ದು, ಈ ವಿಡಿಯೋವನ್ನು ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದೆ. ಅಲ್ಲದೆ ತಾನೂ ಕೂಜ ದೇಶದ ಜನತೆಗೆ ಶುಭ ಕೋರಿದೆ.

ಇನ್ನು 73ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಜಧಾನಿ ದೆಹಲಿಯಲ್ಲಿ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಪ್ರಧಾನಿ ಭಾಷಣಕ್ಕಾಗಿ ರಾಜಧಾನಿ ಸಕಲ ರೀತಿಯಲ್ಲೂ ಸಜ್ಜಾಗಿದೆ. ಇನ್ನು ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಕರ್ನಾಟಕದಲ್ಲಿ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆ ಆಚರಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.  ರಾಜ್ಯದ ಬಹುತೇಕ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿಹೋಗಿವೆ. ಇನ್ನು ಸಚಿವ ಸಂಪುಟ ನೆನೆಗುದಿಗೆ ಬಿದ್ದಿರುವುದರಿಂದ ಆಯಾ ಜಿಲ್ಲೆಗಳ ಹೊಣೆಗಾರಿಕೆಯನ್ನು ಡಿಸಿಗಳಿಗೆ ವಹಿಸಲಾಗಿದೆ. ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನಗರದ ಮಾಣಿಕ್ ಶಾ ಕ್ರೀಡಾಂಗಣದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಪೂರ್ಣಗೊಳಿಸಲಾಗಿದೆ. ಬೆಳಗ್ಗೆ 9.00 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಆಯಾ ಜಿಲ್ಲೆಗಳಿಂದ ಆಗಮಿಸಿರುವ ಕಲಾವಿದರು ತಮ್ಮ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಮಕ್ಕಳ ಮನೋರಂಜನೆ ಕಾರ್ಯಕ್ರಮಗಳು ನಡೆಯಲಿವೆ.

SCROLL FOR NEXT