ಸಚಿನ್ , ವರುಣ್ ಧವನ್ 
ಕ್ರಿಕೆಟ್

ಅಭಿಷೇಕ್ ಬಚ್ಚನ್, ವರುಣ್ ಧವನ್ ಜೊತೆಗೆ ತೆಂಡೊಲ್ಕರ್ ಗಲ್ಲಿ ಕ್ರಿಕೆಟ್! ವಿಡಿಯೋ ವೈರಲ್ 

ಭಾರತದ ಲಿಜೆಂಡರಿ ಬ್ಯಾಟ್ಸ್ ಮನ್ ಸಚಿನ್ ತೆಂಡೊಲ್ಕರ್ ಆರು ವರ್ಷಗಳ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಪಡೆದಿದ್ದರೂ ಗಲ್ಲಿ ಕ್ರಿಕೆಟ್ ನಿಂದ ನಿವೃತ್ತಿ ಪಡೆದುಕೊಂಡಿಲ್ಲ.

ಮುಂಬೈ: ಭಾರತದ ಲಿಜೆಂಡರಿ ಬ್ಯಾಟ್ಸ್ ಮನ್ ಸಚಿನ್ ತೆಂಡೊಲ್ಕರ್ ಆರು ವರ್ಷಗಳ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಪಡೆದಿದ್ದರೂ ಗಲ್ಲಿ ಕ್ರಿಕೆಟ್ ನಿಂದ ನಿವೃತ್ತಿ ಪಡೆದುಕೊಂಡಿಲ್ಲ.

 ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬಾಲಿವುಡ್ ಸೂಪರ್ ಸ್ಟಾರ್ ಗಳಾದ ಅಭಿಷೇಕ್ ಬಚ್ಚನ್ ಹಾಗೂ ವರುಣ್ ಧವನ್ ಜೊತೆಗೆ ಗಲ್ಲಿ ಕ್ರಿಕೆಟ್ ಆಡಿ ಎಂಜಾಯ್ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಒಂದು ಬದಿಯಿಂದ ವರುಣ್ ಧವನ್ ಹಾಗೂ ಅಭಿಷೇಕ್ ಬಚ್ಚನ್  ಬೌಲಿಂಗ್ ಮಾಡಿದ್ದು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಬ್ಯಾಟ್ ಬೀಸಿದ್ದಾರೆ. ನಂತರ  ಸಚಿನ್ ಕೂಡಾ ಬೌಲಿಂಗ್ ಮಾಡಿದ್ದು, ವರುಣ್  ಧವನ್ ಗೆ ಕೆಲ ಎಸೆತಗಳನ್ನು ಹಾಕಿದ್ದಾರೆ. ಈ ವಿಡಿಯೋವನ್ನು ಸಚಿನ್ ತೆಂಡೊಲ್ಕರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೂ ಮುನ್ನ ಮುಂಬೈಯಲ್ಲಿರುವ ಸೆಂಟ್ ಅಂಥೋನಿ ವೃದ್ದಾಶ್ರಮಕ್ಕೆ ಸಚಿನ್ ತೆಂಡೊಲ್ಕರ್ ಭೇಟಿ ನೀಡಿದ್ದು, ಅವರೊಂದಿಗೆ ಕೇರಂ ಆಡುವ ಮೂಲಕ ಕೆಲ ಹೊತ್ತು ಕಳೆದಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಫಿಟ್ ಇಂಡಿಯಾ ಅಭಿಯಾನವನ್ನು ಸ್ವಾಗತಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT