ಕ್ರಿಕೆಟ್

3ನೇ ಟಿ20 ಪಂದ್ಯ: ಅತ್ಯಪರೂಪದ ದಾಖಲೆ ಬರೆದ ಹಿಟ್ ಮ್ಯಾನ್ ರೋಹಿತ್ ಶರ್ಮಾ

Srinivasamurthy VN

ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಟಾಟಿಂಗ್ ನಡೆಸಿದ ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದಾರೆ.

ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಆರಂಭದಿಂದಲೇ ಅಬ್ಬರಿಸಿದ ರೋಹಿತ್ ಶರ್ಮಾ, ಕೇವಲ 34 ಎಸೆತಗಳಲ್ಲಿ 71ರನ್ ಸಿಡಿಸಿದ್ದರು. ಅವರ ಈ ಅಮೋಘ ಬ್ಯಾಟಿಂಗ್ ನಲ್ಲಿ ಐದು ಸಿಕ್ಸರ್ ಹಾಗೂ ಆರು ಬೌಂಡರಿ ಸೇರಿತ್ತು.

ಈ ಅಬ್ಬರದ ಬ್ಯಾಟಿಂಗ್ ಮೂಲಕವೇ ರೋಹಿತ್ ಶರ್ಮಾ ಕ್ರಿಕೆಟ್ ಜಗತ್ತಿನ ಅತ್ಯಪರೂಪದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಹಾಕಿಕೊಂಡಿದ್ದಾರೆ. ವಿಂಡೀಸ್ ವಿರುದ್ಧ ಐದು ಸಿಕ್ಸರ್ ಸಿಡಿಸಿದ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ತಮ್ಮ ಸಿಕ್ಸರ್ ಗಳ ಸಂಖ್ಯೆಯನ್ನು 404ಕ್ಕೆ ಏರಿಕೆ ಮಾಡಿಕೊಂಡರು. ಆ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 400ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಗೆ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಸೇರ್ಪಡೆಯಾಗಿದ್ದಾರೆ.

ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ನ ದೈತ್ಯ ಕ್ರಿಸ್ ಗೈಯ್ಲ್ ಮೊದಲ ಸ್ಥಾನದಲ್ಲಿದ್ದು, ಗೇಯ್ಲ್ 534 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. 2ನೇ ಸ್ಥಾನದಲ್ಲಿ 476 ಸಿಕ್ಸರ್ ಸಿಡಿಸಿರುವ ಪಾಕಿಸ್ತಾನ ಸ್ಫೋಟಕ ಬ್ಯಾಟ್ಸಮನ್ ಶಾಹಿದ್ ಆಫ್ರಿದಿ ಇದ್ದಾರೆ.

SCROLL FOR NEXT