ಆಸ್ಟ್ರೇಲಿಯಾ ತಂಡ 
ಕ್ರಿಕೆಟ್

ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

ಮುಂದಿನ ವರ್ಷ ಜನವರಿ ತಿಂಗಳಿನಲ್ಲಿ ನಡೆಯಲಿರುವ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗಾಗಿ 14 ಮಂದಿ ಆಟಗಾರರನ್ನೊಳಗೊಂಡ ತಂಡವನ್ನು ಆಸ್ಟ್ರೇಲಿಯಾ ಕ್ರಿಕೆಟ್ ಸಮಿತಿ ಇಂದು ಪ್ರಕಟಿಸಿದೆ.

ಕ್ಯಾನ್ ಬೇರಾ: ಮುಂದಿನ ವರ್ಷ ಜನವರಿ ತಿಂಗಳಿನಲ್ಲಿ ನಡೆಯಲಿರುವ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗಾಗಿ 14 ಮಂದಿ ಆಟಗಾರರನ್ನೊಳಗೊಂಡ ತಂಡವನ್ನು ಆಸ್ಟ್ರೇಲಿಯಾ ಕ್ರಿಕೆಟ್ ಸಮಿತಿ ಇಂದು ಪ್ರಕಟಿಸಿದೆ. 

2019ರ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡಿದ್ದ ಗ್ಲೇನ್ ಮ್ಯಾಕ್ಸ್ ವೆಲ್ , ಉಸ್ಮಾನ್  ಖಾವಾಜಾ, ಶಾನ್ ಮಾರ್ಷ್, ಮಾರ್ಕಸ್ ಸ್ಟೋಯಿನಿಸ್, ನಾಥನ್ ಲೈಯಾನ್, ನಾಥನ್ ಕೌಲ್ಟರ್-ನೈಲ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಗಾಯದ ಸಮಸ್ಯೆಯಿಂದಾಗಿ ಜಾಸನ್ ಬೆಹ್ರೆಂಡೋರ್ಫ್ ಕೂಡಾ ಈ ಸರಣಿಯಿಂದ ದೂರ ಉಳಿದಿದ್ದಾರೆ.

ಐಸಿಸಿ ಟೆಸ್ಟ್  ಬ್ಯಾಟ್ಸ್ ಮನ್ ಕ್ರಮಾಂಕದಲ್ಲಿ ನಂಬರ್ 5ರಲ್ಲಿರುವ ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮೊದಲ ಬಾರಿಗೆ ಭಾರತ ವಿರುದ್ಧ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದ್ದು, ಡೇವಿಡ್ ವಾರ್ನರ್ ಅಂತಹ ಆಟಗಾರರೊಂದಿಗೆ ಆಡಲಿದ್ದಾರೆ. ಉಳಿದಂತೆ ಆರೋನ್ ಫಿಂಚ್, ಸ್ವೀವ್ ಸ್ಮೀತ್, ಟಾಪ್ ಕ್ರಮಾಂಕದಲ್ಲಿ, ಅಸ್ಟಾನ್ ಟರ್ನರ್, ಪೀಟರ್ ಹ್ಯಾಂಡ್ಸ್ ಕೊಂಬ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ. ಅಲೆಕ್ಸ್ ಕ್ಯಾರಿ ವಿಕೆಟ್ ಕೀಪರ್ ಆಗಿದ್ದಾರೆ.

ಜನವರಿ 14 ರಂದು ಮುಂಬೈಯಲ್ಲಿ ಮೊದಲ ಏಕದಿನ ಪಂದ್ಯ, ಜನವರಿ 17 ರಂದು ರಾಜ್ ಕೋಟ್ ನಲ್ಲಿ ಎರಡನೇ ಏಕದಿನ ಹಾಗೂ ಜನವರಿ 19  ರಂದು  ಬೆಂಗಳೂರಿನಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದೆ. 

ಆಸ್ಟ್ರೇಲಿಯಾ ತಂಡ ಇಂತಿದೆ: ಆರೋನ್ ಫಿಂಚ್ ( ನಾಯಕ) ಸೀನ್ ಅಬ್ಬೊಟ್, ಆಷ್ಟನ್ ಅಗರ್,ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮ್ಮಿನ್ಸ್ ( ವಿಕೆಟ್ ಕೀಪರ್ ) ಪೀಟರ್  ಹ್ಯಾಂಡ್ಸ್ಕಾಂಬ್, ಜೋಶ್ ಹ್ಯಾಜ್ಲೀವುಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಕೇನ್ ರಿಚರ್ಡ್‌ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಆಷ್ಟನ್ ಟರ್ನರ್, ಡೇವಿಡ್ ವಾರ್ನರ್, ಆಡಮ್ ಜಂಪಾ ಇದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT