ಕ್ರಿಕೆಟ್

ವಿಂಡೀಸ್ ವಿರುದ್ಧ ಭರ್ಜರಿ ಶತಕ: ಲಂಕಾ ದಿಗ್ಗಜ ಜಯಸೂರ್ಯ ದಾಖಲೆ ಸರಿಗಟ್ಟಿದ 'ಹಿಟ್ ಮ್ಯಾನ್' ರೋಹಿತ್

Srinivasamurthy VN

ನವದೆಹಲಿ: ವಿಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ ಆಕರ್ಷಕ ಶತಕ ಸಿಡಿಸಿದ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಶ್ರೀಲಂಕಾದ ದಿಗ್ಗಜ ಆಟಗಾರ ಜಯಸೂರ್ಯ ಅವರ ದಾಖಲೆ ಸರಿಗಟ್ಟಿದ್ದಾರೆ.

ನಿನ್ನೆ ವಿಶಾಖಪಟ್ಟಣಂನಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದರು. ಕೇವಲ 138 ಎಸೆತಗಳಲ್ಲಿ 159 ರನ್ ಗಳಿಸಿದ ರೋಹಿತ್ ಶರ್ಮಾ, ತಮ್ಮ ಶತಕಗಳ ಸಂಖ್ಯೆಯನ್ನು 28ಕ್ಕೆ ಏರಿಕೆ ಮಾಡಿಕೊಂಡರು. ಆ ಮೂಲಕ ಶ್ರೀಲಂಕಾದ ಲೆಜೆಂಡ್ ಆಟಗಾರ ಸನತ್ ಜಯಸೂರ್ಯ ಅವರ ದಾಖಲೆಯನ್ನು ರೋಹಿತ್ ಶರ್ಮಾ ಸರಿಗಟ್ಟಿದ್ದಾರೆ. 

ಇದು ರೋಹಿತ್ ಶರ್ಮಾ ಅವರ 220 ನೇ ಏಕದಿನ ಪಂದ್ಯವಾಗಿದೆ. ಈ ಪಂದ್ಯಗಳಲ್ಲಿ ಅವರು 28 ಶತಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ 27 ಶತಕಗಳನ್ನು ಬಾರಿಸಿದ ಹಶಿಮ್ ಆಮ್ಲಾ ಅವರನ್ನು ಹಿಂದಿಕ್ಕಿದ್ದಾರೆ. ರೋಹಿತ್ ಶರ್ಮಾ ಈಗ ಹೆಚ್ಚು ಶತಕಗಳಿಸಿದ ದಾಖಲೆ ನಿರ್ಮಿಸಿರುವ ಶ್ರೀಲಂಕಾದ ಸನತ್ ಜಯಸೂರ್ಯ (28) ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈಗ  'ಹಿಟ್‌ಮ್ಯಾನ್' ರೋಹಿತ್ ಶರ್ಮಾರ ಮುಂದಿನ ಗುರಿ ರಿಕಿ ಪಾಂಟಿಂಗ್. ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಏಕದಿನ ಕ್ರಿಕೆಟ್‌ನಲ್ಲಿ 30 ಶತಕಗಳನ್ನು ಬಾರಿಸಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಗಳಿಸುವ ದೃಷ್ಟಿಯಿಂದ ರೋಹಿತ್ ಶರ್ಮಾ ಈಗ ಜಂಟಿಯಾಗಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ರಿಕಿ ಪಾಂಟಿಂಗ್ ಮಾತ್ರ ಅವರಿಗಿಂತ ಹೆಚ್ಚು ಶತಕಗಳನ್ನು ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ 49 ಶತಕಗಳ ವಿಶ್ವ ದಾಖಲೆಯನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ 43 ಶತಕಗಳನ್ನು ಬಾರಿಸಿದ್ದಾರೆ. ರಿಕಿ ಪಾಂಟಿಂಗ್ 30 ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

SCROLL FOR NEXT