ರನ್ ಚೇಸಿಂಗ್ ನಲ್ಲೂ ಟೀಂ ಇಂಡಿಯಾ ವಿಶ್ವ ದಾಖಲೆ 
ಕ್ರಿಕೆಟ್

ರನ್ ಚೇಸಿಂಗ್ ನಲ್ಲೂ ಟೀಂ ಇಂಡಿಯಾ ವಿಶ್ವ ದಾಖಲೆ, ಇಷ್ಟಕ್ಕೂ ಆ ದಾಖಲೆ ಯಾವುದು?

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ 4 ವಿಕೆಟ್ ಗಳ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡ ಭಾರತ ತಂಡ ಈ ಗೆಲುವಿನ ಮೂಲಕ ಮತ್ತೊಂದು ವಿಶ್ವ ದಾಖಲೆ ನಿರ್ಮಾಣ ಮಾಡಿದೆ.

ಕಟಕ್: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ 4 ವಿಕೆಟ್ ಗಳ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡ ಭಾರತ ತಂಡ ಈ ಗೆಲುವಿನ ಮೂಲಕ ಮತ್ತೊಂದು ವಿಶ್ವ ದಾಖಲೆ ನಿರ್ಮಾಣ ಮಾಡಿದೆ.

ನಿನ್ನೆ ಕಟಕ್ ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನೀಡಿದ 315 ರನ್ ಗಳ ಗುರಿ ಬೆನ್ನು ಹತ್ತಿದ ಭಾರತ ತಂಡ 48.4 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 316 ರನ್ ಗಳಿಸಿ ಜಯಭೇರಿ ಭಾರಿಸಿತು. ಆ ಮೂಲಕ ಅತೀ ಹೆಚ್ಚು ಬಾರಿ 300ಕ್ಕೂ ಅಧಿಕ ರನ್ ಚೇಸಿಂಗ್ ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡ ಎಂಬ ದಾಖಲೆಯನ್ನು ತನ್ನದಾಗಿಸಿಕೊಂಡಿತು.

ಭಾರತ ತಂಡ 300ಕ್ಕೂ ಅಧಿಕ ರನ್ ಚೇಸಿಂಗ್ ನಲ್ಲಿ ಒಟ್ಟು 17 ಪಂದ್ಯಗಳನ್ನು ಗೆದ್ದಿದ್ದು, 11 ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್ ತಂಡ 2ನೇ ಸ್ಥಾನದಲ್ಲಿದೆ. ಇನ್ನು ತಲಾ 10 ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಜಂಟಿ ಮೂರನೇ ಸ್ಥಾನದಲ್ಲಿದ್ದು, ತಲಾ 6 ಪಂದ್ಯಗಳನ್ನು ಗೆದ್ದಿರುವ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳು ಜಂಟಿ 6ನೇ ಸ್ಥಾನದಲ್ಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT