ಆರ್ಸಿಬಿ ತಂಡ 
ಕ್ರಿಕೆಟ್

ಐಪಿಎಲ್ 2020: ಟೂರ್ನಿಗೆ ಮಾರ್ಚ್ 29ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಚಾಲನೆ!

ಇಂಡಿಯನ್ ಪ್ರೀಮಿಯರ್ ಲೀಗ್‌ 13ನೇ ಆವೃತ್ತಿಯು ಮುಂದಿನ ವರ್ಷ ಮಾರ್ಚ್ 29 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶುರುವಾಗಲಿದ್ದು, ಆತಿಥೇಯ ಹಾಗೂ ನಾಲ್ಕು ಬಾರಿಯ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್ ತನ್ನ ತವರು ನೆಲದಲ್ಲಿ ಅಭಿಯಾನ ಆರಂಭಿಸಲಿದೆ.

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ 13ನೇ ಆವೃತ್ತಿಯು ಮುಂದಿನ ವರ್ಷ ಮಾರ್ಚ್ 29 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶುರುವಾಗಲಿದ್ದು, ಆತಿಥೇಯ ಹಾಗೂ ನಾಲ್ಕು ಬಾರಿಯ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್ ತನ್ನ ತವರು ನೆಲದಲ್ಲಿ ಅಭಿಯಾನ ಆರಂಭಿಸಲಿದೆ.

ಐಪಿಎಲ್‌ 2020 ಟೂರ್ನಿಯ ಆರಂಭಿಕ ದಿನಾಂಕವನ್ನು ಮಾರ್ಚ್ 29ಕ್ಕೆ ನಿಗದಿಪಡಿಸಲಾಗಿದ್ದು ಹಾಲಿ ಚಾಂಪಿಯನ್ಸ್‌ ಮುಂಬೈ ತಂಡಕ್ಕೆ ವಾಂಖೆಡೆಯಲ್ಲಿ ತನ್ನ ಮೊದಲ ಪಂದ್ಯವನ್ನಾಡುವ ಅವಕಾಶ ಲಭ್ಯವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದರರ್ಥ ಟೂರ್ನಿಯ ಮೊದಲೆರಡು ಪಂದ್ಯಗಳನ್ನು ಆಡುವ ತಂಡಗಳಿಗೆ ಆಸ್ಟ್ರೇಲಿಯಾ, ಇಂಗ್ಲೆಂಡ್  ಮತ್ತು ನ್ಯೂಜಿಲೆಂಡ್‌ನ ಕೆಲ ಆಟಗಾರರು ಅಲಭ್ಯರಾಗಲಿದ್ದಾರೆ. ಈ ಅವಧಿಯಲ್ಲಿ ಆಸ್ಟ್ರೇಲಿಯಾ-ನ್ಯೂಜಿಲೆಂಡ್‌ ತಂಡಗಳು ಟಿ20-ಐ ಕ್ರಿಕೆಟ್‌ ಸರಣಿ ಮತ್ತು ಇಂಗ್ಲೆಂಡ್‌-ಶ್ರೀಲಂಕಾ ತಂಡಗಳು ಟೆಸ್ಟ್‌ ಸರಣಿಗಳಲ್ಲಿ ಆಡುವುದರಿಂದ ಪ್ರಾಥಮಿಕ ಐಪಿಎಲ್‌ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಈ ಎರಡೂ ಸರಣಿಗಳು ಮಾರ್ಚ್‌ 31ರಂದು ಅಂತ್ಯಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

ಉಗ್ರ ನಂಟು: ಜಮ್ಮು ಮತ್ತು ಕಾಶ್ಮೀರದ ಐವರು ಸರ್ಕಾರಿ ನೌಕರರು ವಜಾ

SCROLL FOR NEXT