ಟೀಂ ಇಂಡಿಯಾ-ನ್ಯೂಜಿಲ್ಯಾಂಡ್ 
ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧ ಹೀನಾಯವಾಗಿ ಸೋತ ಟೀಂ ಇಂಡಿಯಾ ಮಹಿಳಾ ಹಾಗೂ ಪುರುಷರ ತಂಡ!

ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಹೀನಾಯವಾಗಿ ಸೋಲು ಕಂಡಿತ್ತು. ಇದರ ಬೆನ್ನಲ್ಲೇ ಇದೀಗ ಟೀಂ ಇಂಡಿಯಾ...

ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಹೀನಾಯವಾಗಿ ಸೋಲು ಕಂಡಿತ್ತು. ಇದರ ಬೆನ್ನಲ್ಲೇ ಇದೀಗ ಟೀಂ ಇಂಡಿಯಾ ಪುರುಷರ ತಂಡ ಸಹ 80 ರನ್ ಗಳಿಂದ ಹೀನಾಯ ಸೋಲು ಕಂಡಿದೆ.
ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಬ್ಯಾಟ್ಸ್‌ಮನ್‌ಗಳು ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ದು 6 ವಿಕೆಟ್ ನಷ್ಟಕ್ಕೆ 219 ರನ್ ಗಳನ್ನು ಪೇರಿಸಿತ್ತು. ನ್ಯೂಜಿಲ್ಯಾಂಡ್ ನೀಡಿದ 220 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 139 ರನ್ ಗಳಿಗೆ ಆಲೌಟ್ ಆಗಿದ್ದು 80 ರನ್ ಗಳಿಂದ ಹೀನಾಯ ಸೋಲು ಕಂಡಿದೆ.
ಭಾರತ ಪರ ಶಿಖರ್ ಧವನ್ 29, ವಿಜಯ್ ಶಂಕರ್ 27, ಎಂಎಸ್ ಧೋನಿ 39 ಹಾಗೂ ಹಾರ್ದಿಕ್ ಪಾಂಡ್ಯ 20 ರನ್ ಪೇರಿಸಿದ್ದಾರೆ.
ನ್ಯೂಜಿಲ್ಯಾಂಡ್ ಪರ ಬೌಲಿಂಗ್ ನಲ್ಲಿ ಸೌಥೆ 3, ಫರ್ಗ್ಯೂಸನ್, ಸಾನ್ಟ್ನೇರ್, ಸೋದಿ ಮತ್ತು ಕುಗೆಲಿಜೆನ್ ತಲಾ 2 ವಿಕೆಟ್ ಪಡೆದಿದ್ದಾರೆ. 
ನ್ಯೂಜಿಲ್ಯಾಂಡ್ ಪರ ಸೈಫರ್ಟ್ 84, ಮನ್ರೋ 34, ಕೇನ್ ವಿಲಿಯಮ ಸನ್ 34, ಟೇಲರ್ 23 ಹಾಗೂ ಕುಗೆಲೀಜೆನ್ ಅಜೇಯ 20 ರನ್ ಪೇರಿಸಿದ್ದರು.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯ 2, ಭುವನೇಶ್ವರ್ ಕುಮಾರ್, ಅಹ್ಮದ್, ಕೃನಾಲ್ ಪಾಂಡ್ಯ, ಚಹಾಲ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...