ರೋಹಿತ್ ಶರ್ಮಾ-ಅಜಿಂಕ್ಯ ರಹಾನೆ
ಬೆಂಗಳೂರು: ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿ ಸೋಲಿನ ಬಳಿಕ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದ್ದು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.
2019ರ ವಿಶ್ವಕಪ್ ತಯಾರಿಗೆ ಸಕಲ ಸಿದ್ಧತೆ ನಡೆಸಿರುವ ಬಿಸಿಸಿಐ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಲು ನಾನಾ ಪ್ರಯತ್ನಗಳನ್ನು ಮಾಡುತ್ತಿದ್ದು ಪ್ರತಿಯೊಬ್ಬರಿಗೂ ತಂಡದಲ್ಲಿ ಆಡಲು ಅವಕಾಶ ನೀಡುವ ಮೂಲಕ ಆಟಗಾರ ಸಾಮರ್ಥ್ಯವನ್ನು ಹೊರೆ ಹಚ್ಚುತ್ತಿದೆ.
ಫೆಬ್ರವರಿ 24ರಿಂದ ಆಸ್ಟ್ರೇಲಿಯಾ ವಿರುದ್ಧ ಎರಡು ಟಿ20 ಹಾಗೂ ಐದು ಏಕದಿನ ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್ ಸೇರಿದಂತೆ ಐದು ಸರಣಿಗಳಲ್ಲಿ ರೋಹಿತ್ ಶರ್ಮಾ ಆಡಿದ್ದು ಈ ಹಿನ್ನೆಲೆಯಲ್ಲಿ ಅವರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಇದೇ ವೇಳೆ ಅಜಿಂಕ್ಯ ರಹಾನೆ ಮತ್ತು ಕೆಎಲ್ ರಾಹುಲ್ ಕಮ್ ಬ್ಯಾಕ್ ಮಾಡುವ ಸಾಧ್ಯತೆ ಇದೆ.
ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಿಂದ ಕೆಎಲ್ ರಾಹುಲ್ ಗೆ ವಿಶ್ರಾಂತಿ ನೀಡಲಾಗಿತ್ತು. ಇನ್ನು ರಣಜಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಅಜಿಂಕ್ಯ ರಹಾನೆಗೆ ಈ ಸರಣಿಗೆ ಆಯ್ಕೆ ಮಾಡುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics