ಕ್ರಿಕೆಟ್

ಹ್ಯಾಟ್ರಿಕ್ ಶತಕ ಬಾರಿಸಿದ ಹನುಮ ವಿಹಾರಿ, ಇರಾನಿ ಟ್ರೋಫಿಯಲ್ಲಿ ಹೊಸ ದಾಖಲೆ

Lingaraj Badiger
ನಾಗ್ಪುರ: ಭಾರತೀಯ ಉದಯೋನ್ಮುಖ ಬ್ಯಾಟ್ಸ್ ಮನ್ ಹನುಮ ವಿಹಾರಿ ಅವರು ಸತತ ಮೂರು ಇನ್ನಿಂಗ್ಸ್ ನಲ್ಲಿ ಹ್ಯಾಟ್ರಿಕ್ ಶತಕ ಬಾರಿಸುವ ಮೂಲಕ ಇರಾನಿ ಟ್ರೋಫಿ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ್ದಾರೆ. 
ನಾಗ್ಪುರದಲ್ಲಿ ರಣಜಿ ಚಾಂಪಿಯನ್ ವಿದರ್ಭ ವಿರುದ್ಧ ನಡೆಯುತ್ತಿರುವ ಇರಾನಿ ಟ್ರೋಫಿ ಪಂದ್ಯದಲ್ಲಿ ಶೇಷ ಭಾರತವನ್ನು ಪ್ರತಿನಿಧಿಸುತ್ತಿರುವ ವಿಹಾರಿ ಈ ಮೈಲುಗಲ್ಲನ್ನು ತಲುಪಿದ ಮೊದಲ ಆಟಗಾರ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.
ಶುಕ್ರವಾರ ಮೊದಲ ಇನ್ನಿಂಗ್ಸ್‌ನಲ್ಲಿ 114 ರನ್ ಗಳಿಸಿದ್ದ ವಿಹಾರಿ ದ್ವಿತೀಯ ಇನ್ನಿಂಗ್ಸ್‌ನಲ್ಲೂ ಅಜೇಯ 180 ರನ್ ಬಾರಿಸಿದ್ದರು.
ಹನುಮ ವಿಹಾರಿ ದ್ವಿತೀಯ ಇನ್ನಿಂಗ್ಸ್ ನಲ್ಲಿ 301 ಎಸೆತಗಳನ್ನು ಎದುರಿಸಿ, 19 ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳಿಂದ 180 ರನ್ ಗಳಿಸಿದರು.
ಹನುಮ ವಿಹಾರಿ ಕಳೆದ ವರ್ಷ ನಡೆದ ಇರಾನಿ ಟ್ರೋಫಿ ಪಂದ್ಯದಲ್ಲಿ ವಿದರ್ಭ ವಿರುದ್ಧ 183 ರನ್ ಸೇರಿ ಸತತ ಮೂರು ಶತಕಗಳನ್ನು ದಾಖಲಿಸಿದ್ದಾರೆ.
SCROLL FOR NEXT