ಸ್ಮೃತಿ ಮಂದಾನ 
ಕ್ರಿಕೆಟ್

ಐಸಿಸಿ ಮಹಿಳಾ ಏಕದಿನ ರ್ಯಾಂಕಿಂಗ್: ಅಗ್ರ ಪಟ್ಟ ಉಳಿಸಿಕೊಂಡ ಸ್ಮೃತಿ ಮಂದಾನ

ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಉಳಿಸಿಕೊಂಡಿದ್ದಾರೆ.

ದುಬೈ: ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಉಳಿಸಿಕೊಂಡಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಇಂದು ಬಿಡುಗಡೆ ಮಾಡಿರುವ ರ್ಯಾಂಕಿಂಗ್ ಪಟ್ಟಿಯಲ್ಲಿ ಮಂದಾನ ಅವರು 774 ಅಂಕಗಳೊಂದಿಗೆ ನಂ.1 ಸ್ಥಾನದಲ್ಲಿ ಮುಂದುವರೆದಿದ್ದಾರೆ.
ಆಸ್ಟ್ರೇಲಿಯಾದ ಎಲಿಸೆ ಪೆರಿ ಮತ್ತು ಮೆಗ್ ಲ್ಯಾನಿಂಗ್ ಅವರು ಎರಡು ಹಾಗೂ ಮೂರನೇ ಸ್ಥಾನ ಪಡೆದಿದ್ದು, ನ್ಯೂಜಿಲೆಂಡ್ ನ ಆ್ಯಮಿ ಸಟ್ಟರ್ ವೇಟ್ ಅವರು ನಾಲ್ಕನೆ ಸ್ಥಾನ ಪಡೆದಿದ್ದಾರೆ.
ಉಳಿದಂತೆ ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ 5ನೇ ಸ್ಥಾನ ಪಡೆದಿದ್ದು, ದೀಪ್ತಿ ಶರ್ಮಾ ಅವರು 17 ಸ್ಥಾನಕ್ಕೆ ಹಾಗೂ ಹರ್ಮಾನ್ ಪ್ರೀತ್ ಕೌರ್ ಅವರು 19ನೇ ಸ್ಥಾನಕ್ಕೆ ಜಿಗಿದಿದ್ದಾರೆ. 
22 ವರ್ಷದ ಮಂದಾನ ಅವರು ಇತ್ತೀಚಿಗಷ್ಟೇ ಐಸಿಸಿ ಘೋಷಣೆ ಮಾಡಿದ್ದ 2018ರ ರ ವಾರ್ಷಿಕ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿಯನ್ನು ಪಡೆದಿದ್ದರು.
ಇನ್ನು ಬೌಲರ್ ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಸನಾ ಮಿರ್ ಅವರು ಮೊದಲ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾದ ಮೇಗನ್ ಶುಟ್ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಭಾರತದ ಜೂಲನ್ ಗೋಸ್ವಾಮಿ ಅವರು ಮೂರನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ