ಹರ್ಭಜನ್ ಸಿಂಗ್ 
ಕ್ರಿಕೆಟ್

ಪುಲ್ವಾಮಾ ದಾಳಿ: ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಟೀಂ ಇಂಡಿಯಾ ಆಡದಂತೆ ಹರ್ಭಜನ್ ಆಗ್ರಹ

2019ರ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಆಡಬಾರದೆಂದು ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಂದ ಒತ್ತಾಯ ಕೇಳಿ ಬಂದ ಬೆನ್ನಲ್ಲೆ...

ನವದೆಹಲಿ: 2019ರ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಆಡಬಾರದೆಂದು ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಂದ ಒತ್ತಾಯ ಕೇಳಿ ಬಂದ ಬೆನ್ನಲ್ಲೆ ಇದೀಗ ಭಾರತದ ಹಿರಿಯ ಸ್ಪಿನ್ನರ್‌ ಹರಭಜನ್‌ ಸಿಂಗ್‌ ಕೂಡ ಇದಕ್ಕೆ ಧನಿ ಎತ್ತಿದ್ದಾರೆ.
ಕಳೆದ ಫೆ.14 ರಂದು ಕಣಿವೆ ರಾಜ್ಯ ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ನಡೆಸಿದ್ದ ದಾಳಿಯಲ್ಲಿ 44 ಸಿಆರ್‌ಪಿಎಫ್‌ ಯೋಧರು ಹುತಾತ್ಮರಾಗಿದ್ದರು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಬಾರದೆಂದು ಹರಭಜನ್ ಸಿಂಗ್‌ ಆಗ್ರಹಿಸಿದ್ದಾರೆ.
ಪುಲ್ವಾಮಾ ದಾಳಿಯಿಂದ ದೇಶವಿಡಿ ಆಕ್ರೋಶ ವ್ಯಕ್ತವಾಗಿದೆ. ಪಾಕಿಸ್ತಾನ ಬೆಂಬಲಿತ ಉಗ್ರರು ಈ ದಾಳಿಯ ರೂವಾರಿಗಳಾಗಿದ್ದಾರೆ. ಪಾಕಿಸ್ತಾನದ ಜತೆ ಎಲ್ಲ ಸಂಬಂಧಗಳನ್ನು ಭಾರತ ಕಡಿದುಕೊಳ್ಳಲು ತೀರ್ಮಾನಿಸಿದೆ. ಅದರಂತೆ ಇಂಗ್ಲೆಂಡ್‌ನಲ್ಲಿ ನಡೆಯುವ ಐಸಿಸಿ ವಿಶ್ವಕಪ್‌ ನಲ್ಲಿಯೂ ಭಾರತ, ಪಾಕ್‌ ಜತೆ ಆಡಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT