ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ವಿಶ್ವಕಪ್ ನಲ್ಲಿ ಬದ್ಧವೈರಿ ಪಾಕ್ ಗೆ 2 ಅಂಕ ನೀಡಲು ಇಷ್ಟವಿಲ್ಲ: ಸಚಿನ್

ಭಾರತ - ಪಾಕ್ ಪಂದ್ಯದ ಪರ ಬ್ಯಾಟಿಂಗ್ ಮಾಡಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು, ಮುಂಬರುವ ವಿಶ್ವಕಪ್ ನಲ್ಲಿ ಬದ್ಧವೈರಿ ಪಾಕಿಸ್ತಾನಕ್ಕೆ

ನವದೆಹಲಿ: ಭಾರತ - ಪಾಕ್ ಪಂದ್ಯದ ಪರ ಬ್ಯಾಟಿಂಗ್ ಮಾಡಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು, ಮುಂಬರುವ ವಿಶ್ವಕಪ್ ನಲ್ಲಿ ಬದ್ಧವೈರಿ ಪಾಕಿಸ್ತಾನಕ್ಕೆ ಸುಲಭವಾಗಿ ಎರಡು ಅಂಕಗಳನ್ನು ನೀಡಲು ಇಷ್ಟಪಡುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.
ಪಾಕಿಸ್ತಾನದ ವಿರುದ್ಧ ಆಡಿ ಗೆಲ್ಲಬೇಕಿದೆ. ವಿಶ್ವಕಪ್ ಇತಿಹಾಸದಲ್ಲಿ ಭಾರತ ಪಾಕ್ ವಿರುದ್ಧ ಸೋತ್ತಿಲ್ಲ. ಇಂದು ಅವರನ್ನು ಮತ್ತೊಮ್ಮೆ ಸೋಲುಣಿಸುವ ಸಮಯ ಬಂದಿದೆ. ಪಂದ್ಯ ಆಡದಿರುವುದರಿಂದ ಅವರಿಗೆ 2 ಅಂಕಗಳು ನೀಡಿ ಪಾಕ್ ತಂಡಕ್ಕೆ ಸಹಾಯ ಮಾಡುವುದನ್ನು ವೈಯಕ್ತಿಕವಾಗಿ ವಿರೋಧಿಸುತ್ತೇನೆ ಎಂದು ಸಚಿನ್ ತೆಂಡೂಲ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೇಳಿಕೆ ವಿವಾದವಾಗುತ್ತಿದ್ದಂತೆ ಸಚಿನ್, ನನಗೆ ಮೊದಲು ದೇಶವೇ ಮುಖ್ಯವಾಗಿದ್ದು, ನನ್ನ ದೇಶ ಏನು ನಿರ್ಧಾರ ಮಾಡುತ್ತದೆ ಅದಕ್ಕೆ ಬದ್ಧನಾಗಿರುತ್ತೇನೆ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಪಾಕಿಸ್ತಾನ ವಿರುದ್ದದ ಪಂದ್ಯ ಬಹಿಷ್ಕರಿಸುವುದು ಸೂಕ್ತವಲ್ಲ ಎಂದಿದ್ದರು. ಇದೀಗ ಸಚಿನ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನ ವಿರುದ್ಧದ ಯಾವುದೇ ವ್ಯವಹಾರಕ್ಕೂ ಭಾರತ ಸಿದ್ಧವಿಲ್ಲ. ಹೀಗಾಗಿ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ದದ ಪಂದ್ಯ ಬಹಿಷ್ಕರಿಸುವಂತೆ ಒತ್ತಾಯ ಕೇಳಿಬುರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!