ಕ್ರಿಕೆಟ್

ಸರ್ಕಾರದ ನಿರ್ಧಾರವನ್ನು ಗೌರವಿಸುತ್ತೇವೆ: ಭಾರತ-ಪಾಕ್ ವಿಶ್ವಕಪ್ ಪಂದ್ಯದ ಬಗ್ಗೆ ವಿರಾಟ್ ಕೊಹ್ಲಿ

Srinivas Rao BV
ಮುಂಬರುವ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಸಹ ಅದನ್ನು ಗೌರವಿಸುತ್ತೇವೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. 
ಪುಲ್ವಾಮದಲ್ಲಿ ಭಯೋತ್ಪಾದಕ ದಾಳಿ ನಡೆದು 40 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿರುವ ನಂತರ ಭಾರತ ಪಾಕ್ ಜೊತೆ ಕ್ರಿಕೆಟ್ ಪಂದ್ಯವನ್ನು ಬಹಿಷ್ಕರಿಸಬೇಕೆಂಬ ಒತ್ತಡ ಹೆಚ್ಚುತ್ತಿದೆ. ಆದರೆ ಈ ವರೆಗೂ ಭಾರತೀಯ ಕ್ರಿಕೆಟ್ ಮಂಡಳಿ ಈ ಕುರಿತು ಯಾವುದೇ ತೀರ್ಮಾನವನ್ನೂ ಕೈಗೊಳ್ಳದೇ ಸರ್ಕಾರದ ನಿರ್ಧಾರಕ್ಕೆ ಕಾಯುತ್ತಿದೆ. 
ನಮ್ಮ ನಿಲುವು ಸರಳವಾಗಿದೆ. ರಾಷ್ಟ್ರ ಏನನ್ನು ಮಾಡಲು ಬಯಸುತ್ತದೆಯೋ, ಬಿಸಿಸಿಐ ಏನನ್ನು ನಿರ್ಧರಿಸುತ್ತದೆಯೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಅದೇ ನಮ್ಮ ಅಭಿಪ್ರಾಯ, ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ಸಹ ನಾವು ಅದನ್ನು ಗೌರವಿಸುತ್ತೇವೆ ಎಂದು ಕೊಹ್ಲಿ ಹೇಳಿದ್ದಾರೆ. 
ಭಾರತ ಕ್ರಿಕೆಟ್ ತಂಡದ ಪರವಾಗಿ ವಿರಾಟ್ ಕೊಹ್ಲಿ ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ್ದಾರೆ. 
SCROLL FOR NEXT