ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಆಸೀಸ್ ವಿರುದ್ಧ ಸೋಲು, 'ಧೋನಿ ಕಥೆ ಮುಗಿಯಿತು'; ನಿಧಾನಗತಿಯ ಬ್ಯಾಟಿಂಗ್‌ಗೆ ಟ್ವೀಟರಿಗರು ಆಕ್ರೋಶ!

ವಿಶ್ವಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಆ ಮಧ್ಯೆ ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದ್ದು ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದ ಎಂಎಸ್ ಧೋನಿ ವಿರುದ್ಧ...

ಎಂಎಸ್ ಧೋನಿ
Vishwanath S
Updated On : 25 Feb 2019, 1:27 am
ಹೈದರಾಬಾದ್: ವಿಶ್ವಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಆ ಮಧ್ಯೆ ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದ್ದು ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದ ಎಂಎಸ್ ಧೋನಿ ವಿರುದ್ಧ ನೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ವಿಶಾಖಪಟ್ಟಣನ ಡಾ. ವೈಎಸ್ ರಾಜಶೇಕರ್ ರೆಡ್ಡಿ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 3 ವಿಕೆಟ್ ಗಳಿಂದ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಎಂಎಸ್ ಧೋನಿ 37 ಎಸೆತಗಳಲ್ಲಿ ಅಜೇಯ 29 ರನ್ ಬಾರಿಸಿದ್ದರು. ಇದು ಟ್ವೀಟರಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಪಂದ್ಯವೊಂದರಲ್ಲಿ ಧೋನಿ ಉತ್ತಮವಾಗಿ ಆಡಿದರೆ ಅವರು ವಿಶ್ವಕಪ್ ಗೆ ಸಮರ್ಥ ಆಟಗಾರ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದೀಗ ಅವರ ನಿಧಾನಗತಿಯ ಬ್ಯಾಟಿಂಗ್ ನಿಂದಾಗಿ ವಿಶ್ವಕಪ್ ಗೆ ಧೋನಿ ಬೇಡ ಎಂಬ ಮಾತುಗಳು ತೀವ್ರವಾಗುತ್ತಿದೆ.

Advertisement

Advertisement

ಟಿ20 ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement