ದ್ವಿತೀಯ ಟಿ20: ಟಾಸ್ ಗೆದ್ದ ಅಸೀಸ್ ಫೀಲ್ಡಿಂಗ್ ಆಯ್ಕೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ- ಆಸ್ಟ್ರೇಲಿಯಾಗಳ ನಡುವೆ ದ್ವಿತೀಯ ಟಿ-20 ಪ್ರಾರಂಭವಾಗಿದ್ದು ಭಾರತ ವಿರುದ್ಧ ಟಾಸ್ ಗೆದ್ದಿರುವ ಅಸೀಸ್ ಪಡೆ....
ಬೆಂಗಳೂರು:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ- ಆಸ್ಟ್ರೇಲಿಯಾಗಳ ನಡುವೆ ದ್ವಿತೀಯ ಟಿ-20 ಪ್ರಾರಂಭವಾಗಿದ್ದು ಭಾರತ ವಿರುದ್ಧ ಟಾಸ್ ಗೆದ್ದಿರುವ ಅಸೀಸ್ ಪಡೆ ಫೀಲ್ಡಿಂಗ್ ಆಯ್ದುಕೊಂಡಿದೆ.
ಆಸ್ಟ್ರೇಲಿಯಾ ನಾಯಕ ಆ್ಯರೋನ್ ಫಿಂಚ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.
ಟೀಂ ಇಂಡಿಯಾದ ಪ್ರಾರಂಭಿಕ ಆಟಗಾರ ರೋಹಿತ್ ಶರ್ಮಾ, ಮಯಾಂಕ್ ಮಾರ್ಕಂಡೆ ಹಾಗೂ ಉಮೇಶ್ ಯಾದವ್ ಈ ಬಾರಿ ವಿಶ್ರಾಂತಿ ಪಡೆಯಲಿದ್ದಾರೆ. ರೋಹಿತ್ ಸ್ಥಾನದಲಿ ಶಿಖರ್ ಧವನ್ ಆಡಿದರೆ ಮಯಾಂಕ್ ಹಾಗೂ ಯಾದವ್ ಬದಲಿಗೆ ವಿಜಯ್ ಶಂಕರ್ ಹಾಗೂ ಸಿದ್ಧಾರ್ಥ್ ಕೌಲ್ ಫೀಲ್ಡಿಗಿಳಿಯಲಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ವಿವರ ಹೀಗಿದೆ-
ಭಾರತ: ಶಿಖರ್ ಧವನ್, ಲೋಕೇಶ್ ರಾಹುಲ್, ವಿರಾಟ್ ಕೊಹ್ಲಿ (ನಾಯಕ)ರಿಶಬ್ ಪಂತ್, ಎಂಎಸ್ ಧೋನಿ, ದಿನೇಶ್ ಕಾರ್ತಿಕ್, ವಿಜಯ್ ಶಂಕರ್, ಕೆ.ಪಾಂಡ್ಯ, ಯುಜ್ವೆಂದ್ರ ಚಾಹಲ್, ಜಸ್ಪ್ರಿತ್ ಬುಮ್ರ, ಸಿದ್ರ್ಥ್ ಕೌಲ್
ಆಸ್ಟ್ರೇಲಿಯಾ: ಡಿ ಅರ್ಚಿ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆರನ್ ಫಿಂಚ್ (ನಾಯಕ), ಮ್ಯಾಕ್ಸ್ವೆಲ್, ಪೀಟರ್ ಹ್ಯಾಂಡ್ಸ್ಕಾಂಬ್, ಆಷ್ಟನ್ ಟರ್ನರ್, ನಾಥನ್ ಕೌಲ್ಟರ್-ನೈಲ್, ಪ್ಯಾಟ್ ಕಮ್ಮಿನ್ಸ್, ಜೀಯೆ ರಿಚರ್ಡ್ಸನ್, ಜಾಸನ್ ಬೆಹೆರೆನ್ಡಾಫ್, ಆಡಮ್ ಜಂಪಾ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.