ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಈ ಬಾರಿಯ ಐಪಿಎಲ್‌ನಲ್ಲಿ ಕೊಹ್ಲಿ ಆಡುವುದು ಡೌಟ್? ಆರ್‌ಸಿಬಿ ಅಭಿಮಾನಿಗಳಿಗೆ ಕಾದಿದೆ ಬಿಗ್ ಶಾಕ್!

2019ರ ವಿಶ್ವಕಪ್ ಪಂದ್ಯಾವಳಿ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಆಡುವುದು...

ವಿರಾಟ್ ಕೊಹ್ಲಿ-ಎಬಿಡಿ ವಿಲಿಯರ್ಸ್
Vishwanath S
Updated On : 1 Jan 2019, 8:38 am
ಬೆಂಗಳೂರು: 2019ರ ವಿಶ್ವಕಪ್ ಪಂದ್ಯಾವಳಿ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಆಡುವುದು ಬಹುತೇಕ ಕಡಿಮೆಯಿದೆ. 
ವಿಶ್ವಕಪ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಮುಂಬೈ ತಂಡದ ವೇಗಿ ಜಸ್ ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವುದಾದರೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ಯಾಕೆ ವಿಶ್ರಾಂತಿ ನೀಡಬಾರದು ಎಂದು ಬಿಸಿಸಿಐನ ಕಾರ್ಯದರ್ಶಿಗಳು ಚಕಾವೆತ್ತಿದ್ದು ಈ ಹಿನ್ನೆಲೆಯಲ್ಲಿ ಕೊಹ್ಲಿ ಐಪಿಎಲ್ ನಲ್ಲಿ ಆಡುವ ಸಾಧ್ಯತೆ ಕಡಿಮೆ ಇದೆ. ಇದರೊಂದಿಗೆ ಐಪಿಎಲ್ ನಲ್ಲಿ ವಿರಾಟ ದರ್ಶನ ನೋಡುವ ಆಸೆಗೆ ತಣ್ಣೀರು ಎರೆಚಿದಂತಾಗಿದೆ. 
ಮೇ 30ರಿಂದ ಏಕದಿನ ವಿಶ್ವಕಪ್ ಪಂದ್ಯಾವಳಿ ಇಂಗ್ಲೆಂಡ್ ನಲ್ಲಿ ಆರಂಭಗೊಳ್ಳಲಿದ್ದು ಮೇ 19ರವರೆಗೂ ಐಪಿಎಲ್ ಪಂದ್ಯಾವಳಿ ನಡೆಯಲಿದೆ. ಹೀಗಾಗಿ ಕೊಹ್ಲಿಗೆ ವಿಶ್ರಾಂತಿ ಸಿಗುವುದು ಕಡಿಮೆಯಾಗುತ್ತದೆ. ಇದು ವಿಶ್ವಕಪ್ ಟೂರ್ನಿಯ ಪ್ರದರ್ಶನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. 

Advertisement

Advertisement

ಇನ್ನು ಈ ಬಾರಿ ಕಪ್ ನಮ್ದೆ ಅಂತ ಆರ್ಸಿಬಿ ಅಭಿಮಾನಿಗಳು ಎದೆಯುಬ್ಬಿಸಿ ಹೇಳಿಕೊಳ್ಳುತ್ತಿದ್ದು ಒಂದು ವೇಳೆ ವಿರಾಟ್ ಕೊಹ್ಲಿ ಈ ಬಾರಿ ಆರ್ಸಿಬಿ ತಂಡವನ್ನು ಮುನ್ನಡೆಸದಿದ್ದರೆ ಏನು ಗತಿ ಎಂಬ ಪ್ರಶ್ನೆ ಮೂಡುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement