ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಎಂಬ ಮಹಾ ಸಮರಕ್ಕೆ ಇನ್ನು ಕೆಲ ತಿಂಗಳುಗಳು ಬಾಕಿಯಿದ್ದು ಈ ಮಧ್ಯೆ ಪಂದ್ಯಾವಳಿಯ ವೇಳಾಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸೋರಿಕೆಯಾಗಿದ್ದು ವೈರಲ್ ಆಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಐಪಿಎಲ್ ವೇಳಾಪಟ್ಟಿ ಬಗ್ಗೆ ಇನ್ನು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಲಾಗಿತ್ತು. ಆದರೆ ಇದೀಗ ಐಪಿಎಲ್ 2019ರ ವೇಳಾಪಟ್ಟಿ ಸೋರಿಕೆಯಾಗಿದ್ದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.
ಸೋರಿಕೆಯಾಗಿರುವ ಐಪಿಎಲ್ ವೇಳಾಪಟ್ಟಿ ಪ್ರಕಾರ ಈ ಬಾರಿ ಪಂದ್ಯಾವಳಿ ಭಾರತದಲ್ಲಿ ನಡೆಯುತ್ತಿಲ್ಲ. ಬದಲಿಗೆ ಯುಎಇನಲ್ಲಿ ಆಯೋಜಿಸಲಾಗಿದೆ. ಇನ್ನು ಮಾರ್ಚ್ 29ರಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಇದರಂತೆ ಮೇ 19ರಂದು ದುಬೈನಲ್ಲಿ ಅಂತಿಮ ಫೈನಲ್ ಕಾದಾಟ ನಡೆಯಲಿದೆ. ಆದರೆ ಈ ವೇಳಾಪಟ್ಟಿ ನಿಜವೇ ಎಂಬ ಶಂಕೆ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics