ಸಿಡ್ನಿ ಟೆಸ್ಟ್: ಮಯಾಂಕ್, ಪೂಜಾರ ಅರ್ಧಶತಕ, ಭಾರತ 206 /3 
ಕ್ರಿಕೆಟ್

ಸಿಡ್ನಿ ಟೆಸ್ಟ್: ಮಯಾಂಕ್, ಪೂಜಾರ ಅರ್ಧಶತಕ, ಭಾರತ 206 /3

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಭಾರತ ಅಸೀಸ್ ನಡುವಿನ ನಾಲ್ಕನೇ ಹಾಗೂ ಕಡೆಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿರುವ ಭಾರತ ಚಹಾ ವಿರಾಮದ.....

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಭಾರತ ಅಸೀಸ್ ನಡುವಿನ ನಾಲ್ಕನೇ ಹಾಗೂ ಕಡೆಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿರುವ ಭಾರತ ಚಹಾ ವಿರಾಮದ ವೇಳೆಗೆ 52 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 177 ರನ್ ಕಲೆ ಹಾಕಿದೆ.
ಮಯಾಂಕ್ ಅಗರ್ವಾಲ್ ಹಾಗೂ ಚೇತೇಶ್ವರ ಪೂಜಾರ ಇಬ್ಬರೂ ಅರ್ಧಶತಕದ ಜತೆಯಾಟ ನೀಡಿದ್ದು ಭಾರತಕ್ಕೆ ಆಸರೆಯಾಗಿತ್ತು. 
ಮಯಾಂಕ್ 112  ಬಾಲ್ ಗಳಿಗೆ 77 ರನ್ ಸಿಡಿಸಿದ್ದಾರೆ. ಇದರಲ್ಲಿ ಏಳು ಬೌಂಡರಿ ಹಾಗೂ ಎರಡು ಸಿಕ್ಸರ್ ಗಳು ಸಹ ಸೇರಿದೆ. ಇನ್ನು ಪೂಜಾರ ಮತ್ತೊಂದು ಅರ್ಧಶತಕ ಸಿಡಿಸಿ (61*) ಕ್ರೀಸ್ ನಲ್ಲಿದ್ದಾರೆ. 
ಮಯಾಂಗ್ ನಿರ್ಗಮನದ ಬಳಿಕ ನಾಯಕ ವಿರಾಟ್ ಕೊಹ್ಲಿ ಪೂಜಾರಗೆ ಸಾಥ್ ನೀಡಿದ್ದರು. ಆದರೆ 23 ರನ್ ಗಳಿಸುವಷ್ಟರಲ್ಲಿ ಕೊಹ್ಲಿ ವಿಕೆಟ್ ಒಪ್ಪಿಸಿದ್ದು ಇತ್ತೀಚಿನ ವರದಿ ಬಂದಾಗ ಭಾರತ 3 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿದೆ. ಚೇತೇಶ್ವರ ಪೂಜಾರ 82 ಹಾಗೂ ಅಜಿಂಕ್ಯ ರೆಹಾನೆ 12 ರನ್ ಗಳಿಸಿ ಬ್ಯಾಟಿಂಗ್ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಬುರ್ಖಾ ಧರಿಸಿ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ನೆಕ್ಲೆಸ್ ಕದ್ದ ಮಹಿಳೆಯರು; ಖತರ್ನಾಕ್ ಕಳ್ಳಿಯರ "ಕೈ"ಚಳಕ CCTVಯಲ್ಲಿ ಸೆರೆ!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!