ಕ್ರಿಕೆಟ್

ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ, ರಾಷ್ಟ್ರಪತಿಯಿಂದ ಅಭಿನಂದನೆ

Nagaraja AB
ನವದೆಹಲಿ: ಆಸ್ಟ್ರೇಲಿಯಾ ಸರಣಿ ಗೆದ್ದ ಬಳಿಕ ಟೀಂ ಇಂಡಿಯಾ ಟೆಸ್ಟ್  ವಿಭಾಗದಲ್ಲಿ ವಿಶ್ವದಲ್ಲಿಯೇ ನಂಬರ್ 1 ಸ್ಥಾನ ಅಲಂಕರಿಸಿದೆ.
72 ವರ್ಷಗಳ ನಂತರ ಭಾರತ ಈ ಸಾಧನೆ ಮಾಡಿದ್ದು, ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಆಟಗಾರರ ಬಗ್ಗೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದ ಏಷ್ಯಾದ ಮೊದಲ ರಾಷ್ಟ್ರ ಎಂಬ ಕೀರ್ತಿಗೂ ಭಾರತ ತಂಡ ಪಾತ್ರವಾಗಿದೆ.
ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಕ್ರಿಕೆಟ್  ಸಾಧನೆ ಆಸ್ಟ್ರೇಲಿಯಾದಲ್ಲಿ ಹೋರಾಡಿ, ಅರ್ಹ ಸರಣಿ ಗೆದ್ದ ಟೀಂ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. ಈ ಸರಣಿ ಅತ್ಯುತ್ತಮ ಪ್ರದರ್ಶನ ಹಾಗೂ ಒಗ್ಗಟ್ಟಿಗೆ ಸಾಕ್ಷಿಯಾಗಿದೆ. ಮುಂದಿನ ಪಂದ್ಯಗಳಲ್ಲಿಯೂ ಒಳ್ಳೆಯದಾಗಲಿ ಎಂದು ಪ್ರಧಾನಿ ಮೋದಿ ಟ್ವಟ್ ಮಾಡಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ ಸರಣಿ ಗೆದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಟೀಂ ಇಂಡಿಯಾ ಹಾಗೂ ವಿರಾಟ್ ಕೊಹ್ಲಿಗೆ ಅಭಿನಂದನೆ ಸಲ್ಲಿಸುವುದಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.
ಸರಣಿ ಗೆದ್ದರಿಂದ ತಮ್ಮಗೆ ಅತೀವ ಸಂತಸವಾಗಿದ್ದು, ಎಲ್ಲಾ ಆಟಗಾರರು, ತರಬೇತುದಾರರಿಗೂ ಅಭಿನಂದನೆ ಸಲ್ಲಿಸುವುದಾಗಿ ಬಾಲಿವುಡ್ ನಟಿ ಹಾಗೂ ವಿರಾಟ್ ಕೊಹ್ಲಿ ಮಡದಿ ಅನುಷ್ಕಾಶರ್ಮಾ  ಟ್ವೀಟ್ ಮಾಡಿದ್ದಾರೆ.
SCROLL FOR NEXT