ರಿಷಬ್ ಪಂತ್ 
ಕ್ರಿಕೆಟ್

ರ‍್ಯಾಂಕಿಂಗ್‌ನಲ್ಲೂ ರಿಷಬ್ ಪಂತ್ ಅದ್ಭುತ ಸಾಧನೆ: ಪೂಜಾರ, ಪಂತ್, ಕೊಹ್ಲಿ ಯಾವ ಸ್ಥಾನದಲ್ಲಿದ್ದಾರೆ?

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದ್ದು ಇನ್ನು ಸರಣಿಯಲ್ಲಿ ಮೂರು ಶತಕ ಸೇರಿದಂತೆ...

ದುಬೈ: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದ್ದು ಇನ್ನು ಸರಣಿಯಲ್ಲಿ ಮೂರು ಶತಕ ಸೇರಿದಂತೆ 521 ರನ್ ಬಾರಿಸಿದ್ದ ಕ್ಲಾಸಿಕ್ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಐಸಿಸಿ ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. 
ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 159 ರನ್ ಭರ್ಜರಿ ಶತಕ ಸಿಡಿಸಿದ್ದ ಯುವ ಕ್ರಿಕೆಟಿಗ ರಿಷಬ್ ಪಂತ್ 21 ಸ್ಥಾನಗಳ ಏರಿಕೆ ಕಾಣುವ ಮೂಲಕ 17ನೇ ಸ್ಥಾನಕ್ಕೇರಿದ್ದಾರೆ. ಇನ್ನು ಈ ಹಿಂದೆ ಫರೂಖ್ ಇಂಜಿನಿಯರ್ ಇಂತಹ ಸಾಧನೆ ಮಾಡಿದ್ದರು.
ರಿಷಬ್ ಪಂತ್ ಕೇವಲ 9 ಟೆಸ್ಟ್ ಪಂದ್ಯಗಳಲ್ಲೇ ಟಾಪ್ 20 ರ‍್ಯಾಂಕಿಂಗ್‌ನಲ್ಲಿ ಸ್ಥಾನ ಪಡೆದು ಕಮಾಲ್ ಮಾಡಿದ್ದಾರೆ. ರಿಷಬ್ 7 ಇನ್ನಿಂಗ್ಸ್ ಲ್ಲಿ 350 ರನ್ ಸಿಡಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಇನ್ನು 2016ರಲ್ಲಿ ನಡೆದ ಐಸಿಸಿ ಅಂಡರ್ 19 ವಿಶ್ವಕಪ್ ನಲ್ಲಿ ಪಂತ್ 18 ಎಸತೆಗಳಲ್ಲಿ ಅರ್ಧ ಶತಕ ಸಿಡಿಸಿದ್ದರು.
ಇನ್ನು 922 ಅಂಕಗಳೊಂದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲೇ ಭದ್ರವಾಗಿ ಉಳಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ