ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಾಂಡ್ಯಾ- ರಾಹುಲ್
ನವದೆಹಲಿ: ಖಾಸಗಿ ವಾಹಿನಿಯ ಟಾಕ್ ಶೋ ವೊಂದರಲ್ಲಿ ಪಾಲ್ಗೊಂಡು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ತುತ್ತಾಗಿರುವ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮತ್ತೋರ್ವ ಕ್ರಿಕೆಟಿಗ ಕೆಎಲ್ ರಾಹುಲ್ ಗೆ ಬಿಸಿಸಿಐ ಶೋಕಾಸ್ ನೋಟಿಸ್ ನೀಡಿದೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಕೆಎಲ್ ರಾಹುಲ್ ಜೊತೆ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಸ್ತ್ರೀದ್ವೇಷಿ ಹಾಗೂ ಕಾಮಪ್ರಚೋದಕ ಹೇಳಿಕೆ ನೀಡುವ ಮೂಲಕ ಸಿಕ್ಕಿ ಬಿದ್ದಿದ್ದರು. ಪಾಂಡ್ಯಾ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪಾಂಡ್ಯ ಕ್ಷಮೆಯಾಚನೆ ಮಾಡಿದ್ದಾರೆ.
ಆದರೆ ಈಗ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ವಿವರ ಕೋರಿ ಇಬ್ಬರೂ ಆಟಗಾರರಿಗೆ ಶೋಕಾಸ್ ನೋಟಿಸ್ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐನ ಮುಖ್ಯಸ್ಥ ವಿನೋದ್ ರಾಯ್ ಅವರು, ಇಬ್ಬರೂ ಆಟಗಾರರಿಗೆ ವಿವರಣೆ ನೀಡಲು 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ. ಭಾರತೀಯ ತಂಡವನ್ನು ಪ್ರತಿನಿಧಿಸುವವರು ಸಮಾಜದಲ್ಲಿ ಹೇಗೆ ವರ್ತಿಸಬೇಕು ಎಂಬುದಕ್ಕೆ ಮಾನದಂಡಗಳಿವೆ. ಅಂತೆಯೇ ಕ್ರಿಕೆಟ್ ಸರಣಿಯ ನಡುವೆ ಕ್ರಿಕೆಟಿಗರು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದೇ ಇರುವಂತೆ ನಿರ್ಬಂದ ಹೇರಲು ಸಾಧ್ಯವಿಲ್ಲ. ಇದ್ಕಕೂ ಕ್ರಿಕೆಟ್ ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಅಂದ ಹಾಗೆ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪಾಂಡ್ಯ, ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಸಜ್ಜಾಗುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics