ಕ್ರಿಕೆಟ್

ಅಶ್ಲೀಲ ಹೇಳಿಕೆಗೆ ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ತಲೆದಂಡ; ಆಸ್ಟ್ರೇಲಿಯಾ ಏಕದಿನ ಸರಣಿಯಿಂದ ಗೇಟ್ ಪಾಸ್!

Vishwanath S
ಸಿಡ್ನಿ: ಅಸಭ್ಯ ಹೇಳಿಕೆಯಿಂದ ವಿವಾದಕ್ಕೆ ಸಿಲುಕಿರುವ  ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತು ಮಾಡಲಾಗಿದ್ದು ಆಟಗಾರರು ಭಾರತಕ್ಕೆ ವಾಪಸಾಗಲಿದ್ದಾರೆ.
ಸಿಡ್ನಿಯಲ್ಲಿ ನಾಳೆಯಿಂದ ಏಕದಿನ ಪಂದ್ಯ ಆರಂಭವಾಗಲಿದೆ. ಆದರೆ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಕೊಕ್ ನೀಡಲಾಗಿದೆ.
ಬಿಸಿಸಿಐನ ಆಡಳಿತಾಧಿಕಾರಿಗಳ ಸಮಿತಿ(ಸಿಒಎ) ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ರನ್ನು ಮೊದಲ ಪಂದ್ಯದಿಂದ ತೆಗೆದುಹಾಕಬಹುದು ಎಂದು ಶಿಫಾರಸ್ಸು ಮಾಡಿತ್ತು ಆದರೆ ಬಿಸಿಸಿಐ ಸರಣಿಯಿಂದ ಅಮಾನತು ಮಾಡಿದೆ. 
ಇಬ್ಬರು ಆಟಗಾರರ ವಿರುದ್ಧ ಸಮಿತಿಯೊಂದನ್ನು ರಚಿಸಿದ್ದು ಅವರ ವಿಚಾರಣೆ ಮುಂದುವರೆಯಲಿದೆ ಎಂದು ಆಡಳಿತಾಧಿಕಾರಿ ಸಮಿತಿ ಮುಖ್ಯಸ್ಥ ವಿನೋದ್ ರಾಯ್ ಹೇಳಿದ್ದಾರೆ. 
ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಮಹಿಳೆಯರ ಕುರಿತು ಅಸಭ್ಯ ಹೇಳಿಕೆ ನೀಡಿದ್ದರು. ಅಂತೆಯೇ ಹಾರ್ದಿಕ್ ಪಾಂಡ್ಯ ಕೂಡ ತಮ್ಮ ಹೇಳಿಕೆಗೆ ಟ್ವಿಟರ್ ನಲ್ಲಿ ಮತ್ತು ಬಿಸಿಸಿಐಗೆ ನೀಡಿದ್ದ ಸ್ಪಷ್ಟನೆಯಲ್ಲಿ ಕ್ಷಮೆ ಕೇಳಿದ್ದರು, ಮತ್ತೆ ಇದು ಪುನಾರಾವರ್ತನೆಯಾಗುವುದಿಲ್ಲ ಎಂದು ಹೇಳಿದ್ದರು.
SCROLL FOR NEXT