ಟೀಂ ಇಂಡಿಯಾ 
ಕ್ರಿಕೆಟ್

ಧೋನಿ ನಿಧಾನಗತಿಯ ಬ್ಯಾಟಿಂಗ್, ರೋ'ಹಿಟ್' ಶತಕ ವ್ಯರ್ಥ, ಭಾರತಕ್ಕೆ ಹೀನಾಯ ಸೋಲು!

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ. ಆರಂಭಿಕ ಆಟಗಾರರ ವೈಫಲ್ಯ ಹಾಗೂ ಎಂಎಸ್ ಧೋನಿ ನಿಧಾನಗತಿಯ ಬ್ಯಾಟಿಂಗ್ ಭಾರತ ಸೋಲಿಗೆ ಕಾರಣವಾಗಿದೆ.

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ  ಸೋಲು ಕಂಡಿದೆ. ಆರಂಭಿಕ ಆಟಗಾರರ ವೈಫಲ್ಯ ಹಾಗೂ ಎಂಎಸ್ ಧೋನಿ ನಿಧಾನಗತಿಯ ಬ್ಯಾಟಿಂಗ್ ಭಾರತ ಸೋಲಿಗೆ ಕಾರಣವಾಗಿದೆ. 
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 34 ರನ್ ಗಳಿಂದ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ಮಾಡಿ 288 ರನ್ ಗಳನ್ನು ಪೇರಿಸಿದೆ. 289 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದ್ದು ಶಿಖರ್ ಧವನ್ ಮೊದಲ ಎಸೆತದಲ್ಲಿ ಔಟ್ ಆಗಿ ಗೋಲ್ಡನ್ ಡಕೌಟ್ ಆದರು. ನಂತರ ಬಂದ ನಾಯಕ ವಿರಾಟ್ ಕೊಹ್ಲಿ 3 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ನಂತರ ಬಂದ ಅಂಬಟ್ಟಿ ರಾಯುಡು ಎರಡನೇ ಎಸೆತದಲ್ಲಿ ಡಕೌಟ್ ಆಗಿ ಪೆವಿಲಿಯನ್ ಸೇರಿದರು. ಒಟ್ಟಾರೆ 4 ರನ್ ಗಳಿಗೆ ಭಾರತ 3 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. 
ಈ ವೇಳೆ ಬಂದ ಎಂಎಸ್ ಧೋನಿ ರೋಹಿತ್ ಶರ್ಮಾಗೆ ಸಾಥ್ ನೀಡಿದರು. ಆದರೆ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿ 96 ಎಸೆತಗಳಲ್ಲಿ 51 ರನ್ ಗಳಿಸಿ ಔಟಾದರು. ಇನ್ನು ಅಬ್ಬರದ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ 129 ಎಸೆತಗಳಲ್ಲಿ 133 ರನ್ ಬಾರಿಸುವ ಮೂಲಕ ಪಂದ್ಯ ಗೆಲ್ಲಿಸುವ ಯತ್ನ ಮಾಡಿದರು. ಆದರೆ ವಿಫಲರಾದರು. ಒಟ್ಟಿನಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 254 ರನ್ ಪೇರಿಸಿತು.
ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ರಿಚರ್ಡ್ ಸನ್ 4, ಬೆಹ್ರೆನ್ ಡಾರ್ಫ್ ಮತ್ತು ಸ್ಟೋಯ್ನಿಸ್ ತಲಾ 2 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!