ಸಂಗ್ರಹ ಚಿತ್ರ 
ಕ್ರಿಕೆಟ್

ಭಾರತ ವರ್ಸಸ್ ಆಸ್ಟ್ರೇಲಿಯಾ: ಪಾಂಡ್ಯಾ, ಕೆಎಲ್ ರಾಹುಲ್ ಔಟ್, ಮಯಾಂಕ್ ಅಗರ್ವಾಲ್, ವಿಜಯ್ ಶಂಕರ್ ಇನ್

ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ರನ್ನು ಹಾಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಕೈ ಬಿಡಲಾಗಿದ್ದು ಅವರ ಸ್ಥಾನಕ್ಕೆ ಮಯಾಂಕ್ ಅಗರ್ವಾಲ್, ವಿಜಯ್ ಶಂಕರ್ ಅವರನ್ನು ಸೇರಿಸಿಕೊಳ್ಳಲಾಗಿದೆ.

ನವದೆಹಲಿ: ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಅಸಭ್ಯ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಕ್ರಿಕೆಟಿಗಾರದ ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ರನ್ನು ಹಾಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಕೈ ಬಿಡಲಾಗಿದ್ದು ಅವರ ಸ್ಥಾನಕ್ಕೆ ಮಯಾಂಕ್ ಅಗರ್ವಾಲ್, ವಿಜಯ್ ಶಂಕರ್ ಅವರನ್ನು ಸೇರಿಸಿಕೊಳ್ಳಲಾಗಿದೆ.
ಈ ಹಿಂದೆ ಆಸಿಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿ ಆಯ್ಕೆಗಾರರ ಗಮನ ಸೆಳೆದಿದ್ದ ಮಯಾಂಕ್ ಅಗರ್ವಾಲ್ ನಿರೀಕ್ಷೆಯಂತೆಯೇ ಆಸಿಸ್ ವಿರುದ್ಧ ಏಕದಿನ ಸರಣಿಗೂ ಆಯ್ಕೆಯಾಗಿದ್ದು, ದೇಶೀಯ ಕ್ರಿಕೆಟ್ ನಲ್ಲಿ ಸಾಮರ್ಥ್ಯ ಪ್ರದರ್ಶನ ಮಾಡಿದ್ದ ವಿಜಯ್ ಶಂಕರ್ ಅವರಿಗೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಇಂದು ನಡೆದ ಸಭೆಯಲ್ಲಿ ಬಿಸಿಸಿಐ ಹಾಗೂ ಆಯ್ಕೆ ಸಮಿತಿ ಈ ಬಗ್ಗೆ ತನ್ನ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. 
ಇನ್ನು ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಅಸಭ್ಯ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವ ಹಾರ್ದಿಕ್ ಪಾಂಡ್ಯಾ, ಕೆಎಲ್ ರಾಹುಲ್ ರಿಗೆ 2 ಏಕದಿನ ಪಂದ್ಯಗಳ ನಿಷೇಧ ಹೇರುವಂತೆ ಬಿಸಿಸಿಐ ಆಡಳಿತ ಮಂಡಳಿ ಅಧ್ಯಕ್ಷ ವಿನೋದ್ ರಾಯ್ ಅವರು ಶಿಫಾರಸ್ಸು ಮಾಡಿದ್ದಾರೆಯಾದರೂ, ಆಡಳಿತ ಮಂಡಳಿ ಸದಸ್ಯೆ ಡಯಾನಾ ಎಡುಲ್ಜಿ ಅವರು ವಿಚಾರಣೆ ನಡೆಸಿ ಈ ಬಗ್ಗೆ ನಿರ್ಣಯ ಕೈಗೊಳ್ಳಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!