ಅತಿಯಾದ ಆತ್ಮವಿಶ್ವಾಸ; ನಾವು ಗೆದ್ದೆ ಬಿಡ್ತೀವಿ ಅಂತಾ ಡ್ರಿಂಕ್ಸ್ ಬ್ರೇಕ್ ವೇಳೆ ಕೊಹ್ಲಿ ಡ್ಯಾನ್ಸ್, ವಿಡಿಯೋ ವೈರಲ್!
ಆಸ್ಟ್ರೇಲಿಯಾ ನೆಲದಲ್ಲಿ 71 ವರ್ಷಗಳ ಬಳಿಕ ಟೆಸ್ಟ್ ಸರಣಿ ಗೆದ್ದು ಅತಿಯಾದ ಆತ್ಮವಿಶ್ವಾಸದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಯಾವುದೇ ತಂತ್ರವನ್ನು...
ಆಸ್ಟ್ರೇಲಿಯಾ ನೆಲದಲ್ಲಿ 71 ವರ್ಷಗಳ ಬಳಿಕ ಟೆಸ್ಟ್ ಸರಣಿ ಗೆದ್ದು ಅತಿಯಾದ ಆತ್ಮವಿಶ್ವಾಸದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಯಾವುದೇ ತಂತ್ರವನ್ನು ಮಾಡದೆ ಕೈಸುಟ್ಟಿಕೊಂಡಿದ್ದಾರೆ.
ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 34 ರನ್ ಗಳಿಂದ ಗೆದ್ದು ಬೀಗಿತ್ತು. ಇನ್ನು ಆಸ್ಟ್ರೇಲಿಯಾ ವೇಗಿಗಳ ಮಾರಕ ಬೌಲಿಂಗ್ ದಾಳಿಗೆ ಟೀಂ ಇಂಡಿಯಾದ ಆರಂಭಿಕ ಸ್ಥಂಬಗಳೇ ಕುಸಿದುಬಿದ್ದಿತ್ತು.
ಇನ್ನು ಆಸ್ಟ್ರೇಲಿಯಾ ಬ್ಯಾಟಿಂಗ್ ವೇಳೆ ಡ್ರಿಂಕ್ಸ್ ಬ್ರೇಕ್ ನಲ್ಲಿ ವಿರಾಟ್ ಕೊಹ್ಲಿ ಅತೀ ಉತ್ಸಾಹದಿಂದ ಡ್ಯಾನ್ಸ್ ಮಾಡಿದ್ದರು. ಈ ವಿಡಿಯೋ ಇದೀಗ ಟ್ವೀಟರಿಗರ ಆಕ್ರೋಶಕ್ಕೆ ಕಾರಣವಾಗಿದೆ.
Drinks Break Dance.