ಜೇಕಬ್ 
ಕ್ರಿಕೆಟ್

ಟೀಂ ಇಂಡಿಯಾ ಮಾಜಿ ಆಟಗಾರ ಜೀವನ್ಮರಣ ಹೋರಾಟ; ಬದುಕಿಸಿಕೊಡಿ ಎಂದು ಪತ್ನಿ ಕಂಬನಿ!

ಜಗತ್ತಿನಲ್ಲೇ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂದು ಕರೆಸಿಕೊಳ್ಳಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ತನ್ನ ಪತಿ ಟೀಂ ಇಂಡಿಯಾ ಮಾಜಿ ಆಟಗಾರನನ್ನು ಉಳಿಸಿಕೊಡುವಂತೆ...

ನವದೆಹಲಿ: ಜಗತ್ತಿನಲ್ಲೇ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂದು ಕರೆಸಿಕೊಳ್ಳಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ತನ್ನ ಪತಿ ಟೀಂ ಇಂಡಿಯಾ ಮಾಜಿ ಆಟಗಾರನನ್ನು ಉಳಿಸಿಕೊಡುವಂತೆ ಪತ್ನಿ ಅಂಗಲಾಚಿದ್ದಾರೆ. 
46 ವರ್ಷದ ಮಾಜಿ ಆಟಗಾರ ಜೇಕಬ್ ಎಂಬುವರು ಡಿಸೆಂಬರ್ 28ರಂದು ಅಪಘಾತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ವಡೋದರಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ಖರ್ಚು ವೆಚ್ಚವನ್ನು ಕಟ್ಟಲಾಗದೆ ಜೇಕಬ್ ಕುಟುಂಬ ಕಂಗಾಲಾಗಿದೆ. 
ದಿನಕ್ಕೆ 70 ಸಾವಿರ ರುಪಾಯಿ ಮೊತ್ತವನ್ನು ಪಾವತಿಸಲಾಗದೆ ಅವರ ಪತ್ನಿ ಪರದಾಡುತ್ತಿದ್ದಾರೆ. ಅವರ ಮನವಿಗೆ ಸ್ಪಂಧಿಸಿದ ಬಿಸಿಸಿಐ 5 ಲಕ್ಷ ರುಪಾಯಿ ಬಿಡುಗಡೆ ಮಾಡಿದೆ. ಈಗಾಗಲೇ ವೆಚ್ಚ 11 ಲಕ್ಷ ರುಪಾಯಿ ದಾಟಿದೆ. ಇನ್ನು ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರೆಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ. 
ಟೀಂ ಇಂಡಿಯಾ ಪರ ಜೇಕಬ್ ಒಟ್ಟು 10 ಏಕದಿನ ಪಂದ್ಯಗಳನ್ನು ಆಡಿದ್ದು 158 ರನ್ ಪೇರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ, ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಕಾಂಗ್ರೆಸ್, ಚಾಮುಂಡಿ ಬೆಟ್ಟವನ್ನು 'ಟೂಲ್‌ಕಿಟ್' ಆಗಿ ಬಳಸುತ್ತಿದೆ: ಆರ್ ಅಶೋಕ್

ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!

'HAL ನಿರ್ಮಿತ ತೇಜಸ್ ಮಾರ್ಕ್-1ಎ ಫೈಟರ್ ಜೆಟ್‌ ಗಳು ಹಸ್ತಾಂತರಕ್ಕೆ ಸಿದ್ಧ': ರಕ್ಷಣಾ ಕಾರ್ಯದರ್ಶಿ

SCROLL FOR NEXT