ಶಿಖರ್ ಧವನ್ 
ಕ್ರಿಕೆಟ್

ಕೊಹ್ಲಿ ಬಳಿಕ ವೇಗದ 5000 ರನ್ ಸಿಡಿಸಿದ ಶಿಖರ್ ಧವನ್, ಲಾರಾ ದಾಖಲೆ ಧೂಳಿಪಟ!

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ವೇಗವಾಗಿ 5000 ರನ್ ಸಿಡಿಸುವ ಮೂಲಕ ವೆಸ್ಟ್ ಇಂಡೀಸ್ ತಂಡದ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ನೇಪಿಯರ್: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ವೇಗವಾಗಿ 5000 ರನ್ ಸಿಡಿಸುವ ಮೂಲಕ ವೆಸ್ಟ್ ಇಂಡೀಸ್ ತಂಡದ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. 
ನ್ಯೂಜಿಲ್ಯಾಂಡ್ ವಿರುದ್ಧ ನೇಪಿಯರ್ ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಶಿಖರ್ ಧವನ್, ತಮ್ಮ ವೃತ್ತಿ ಜೀವನದಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. 
ಇನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಬಳಿಕ ವೇಗವಾಗಿ 5000 ರನ್ ಪೂರೈಸಿದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ 5000 ರನ್ ಪೂರೈಸಲು 114 ಇನ್ನಿಂಗ್ಸ್ ತೆಗೆದುಕೊಂಡಿದ್ದರು. ಶಿಖರ್ ಧವನ್ 118 ಇನ್ನಿಂಗ್ಸ್ ನಲ್ಲಿ ಈ ದಾಖಲೆ ಬರೆದಿದ್ದಾರೆ. ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ಸಹ 118 ಇನ್ನಿಂಗ್ಸ್ ನಲ್ಲಿ 5000 ರನ್ ಪೂರೈಸಿದ್ದರು.
ಅತಿ ವೇಗದಲ್ಲಿ 5 ಸಾವಿರ ರನ್ ದಾಖಲೆ:
* ಹಾಶೀಮ್ ಆಮ್ಲಾ - 101 ಇನ್ನಿಂಗ್ಸ್ 
* ವಿವ್ ರಿಚರ್ಡ್ಸ್ 114 ಇನ್ನಿಂಗ್ಸ್
* ವಿರಾಟ್ ಕೊಹ್ಲಿ 114 ಇನ್ನಿಂಗ್ಸ್
* ಬ್ರಿಯಾನ್ ಲಾರಾ 118 ಇನ್ನಿಂಗ್ಸ್ 
* ಶಿಖರ್ ಧವನ್ 188 ಇನ್ನಿಂಗ್ಸ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; ಮುಖ್ಯ CEC ರಾಜೀನಾಮೆಗೆ ಬಿಗಿಪಟ್ಟು..!

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ