ವಿರಾಟ್ ಕೊಹ್ಲಿ- ಜಾಸನ್ ಹೋಲ್ಡರ್ 
ಕ್ರಿಕೆಟ್

45 ವರ್ಷಗಳ ಬಳಿಕ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಪಡೆದ ಕೆರಿಬಿಯನ್!

ಬರೋಬ್ಬರಿ 45 ವರ್ಷಗಳ ಬಳಿಕ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ವೆಸ್ಟ್ ಇಂಡೀಸ್ ಆಟಗಾರನೊಬ್ಬ ನಂಬರ್ 1 ಸ್ಥಾನ ಪಡೆದಿದ್ದಾರೆ.

ದುಬೈ: ಬರೋಬ್ಬರಿ 45 ವರ್ಷಗಳ ಬಳಿಕ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ವೆಸ್ಟ್ ಇಂಡೀಸ್ ಆಟಗಾರನೊಬ್ಬ ನಂಬರ್ 1 ಸ್ಥಾನ ಪಡೆದಿದ್ದಾರೆ. 
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ಜಾಸನ್ ಹೋಲ್ಡರ್ ಆಕರ್ಷಕ ದ್ವಿಶತಕ ಸಿಡಿಸುವ ಜತೆಗೆ 2 ವಿಕೆಟ್ ಪಡೆದುಕೊಂಡು ಮಿಂಚಿದ್ದರು .ಈ ಪ್ರದರ್ಶನದಿಂದ 440 ಅಂಕ ಸಂಪಾದಿಸಿರುವ ಅವರು ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ನಂಬರ್ 1 ಆಲ್ ರೌಂಡರ್ ಆಗಿ ಹೊರಹೊಮ್ಮಿದ್ದಾರೆ. 
ಇನ್ನು ಕಳೆದ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕ್ರಿಕೆಟಿಗನೋರ್ವ ಐಸಿಸಿ ಟೆಸ್ಟ್ ಶ್ರೇಯಾಂಕದ ಆಲ್ ರೌಂಡರ್ ವಿಭಾಗದಲ್ಲಿ ನಂಬರ್ 1 ಸ್ಥಾನ ಅಲಂಕರಿಸಿರುವ ಮಹತ್ವದ ಸಾಧನೆ ಮಾಡಿದ್ದಾರೆ. 1974ರಲ್ಲಿ ವೆಸ್ಟ್ ಇಂಡೀಸ್ ನ ಗಾರ್ಫಿಲ್ಡ್ ಸೊಬರ್ಸ್ ಈ ಶ್ರೇಯಾಂಕ ಪಡೆದುಕೊಂಡಿದ್ದರು. 
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಕಿಗಾಸೋ ರಬಾಡ ನಂಬರ್ 1 ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT