ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್
ಹ್ಯಾಮಿಲ್ಟನ್: ಭಾರತದ ವಿರುದ್ಧ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆತಿಥೇಯ ನ್ಯೂಜಿಲೆಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಹ್ಯಾಮಿಲ್ಟನ್ ನ ಸೆಡ್ಡಾನ್ ಪಾರ್ಕ್ ಕ್ರೀಡಾಂಗಣದಲ್ಲಿ 4ನೇ ಏಕದಿನ ಪಂದ್ಯ ಆರಂಭವಾಗಿದ್ದು, ಭಾರತದ ವಿರುದ್ಧ ಟಾಸ್ ಗೆದ್ದಿರುವ ಕಿವೀಸ್ ಪಡೆಯ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ 3-0 ಅಂತರದಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ನ್ಯೂಜಿಲೆಂಡ್ ತಂಡ ಸರಣಿಯನ್ನು ಕೈ ಚೆಲ್ಲಿದ್ದು, ಬಾಕಿ ಇರುವ 2 ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ಮಾನ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ.
ಇನ್ನು ಈಗಾಗಲೇ 3-0 ಅಂತರದಲ್ಲಿ ಸರಣಿ ಕೈ ವಶ ಮಾಡಿಕೊಂಡಿರುವ ಭಾರತ ತಂಡ ತಂಡದ ಬೆಂಚ್ ಸ್ಟ್ರೆಂಥ್ ಪರೀಕ್ಷೆಗೆ ಮುಂದಾಗಿದೆ. ಹೀಗಾಗಿ ಬಾಕಿ ಇರುವ ಎರಡು ಪಂದ್ಯಗಳಿಂದ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಉಪ ನಾಯಕ ರೋಹಿತ್ ಶರ್ಮಾ ತಂಡದ ಸಾರಥ್ಯ ವಹಿಸಿದ್ದಾರೆ. ಅಂತೆಯೇ ಇಂದಿನ ಪಂದ್ಯದ ಮೂಲಕ ಉದಯೋನ್ಮುಖ ಆಟಗಾರ ಶುಭ್ ಮನ್ ಗಿಲ್ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದಾರೆ.