ಏಕದಿನಕ್ಕೆ ಪದಾರ್ಪಣೆ ಮಾಡಿದ ಶುಭ್ ಮನ್ ಗಿಲ್ 
ಕ್ರಿಕೆಟ್

ಕೊನೆಗೂ ಅಂತಾರಾಷ್ಟ್ರೀಯ ಏಕದಿನಕ್ಕೆ ಪದಾರ್ಪಣೆ ಮಾಡಿದ ಶುಭ್ ಮನ್ ಗಿಲ್

ನ್ಯೂಜಿಲೆಂಡ್ ವಿರುದ್ಧ 4ನೇ ಏಕದಿನ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಭಾರತ ಉದಯೋನ್ಮುಖ ಆಟಗಾರ ಶುಭ್ ಮನ್ ಗಿಲ್ ಪದಾರ್ಪಣೆ ಮಾಡಿದ್ದಾರೆ.

ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧ 4ನೇ ಏಕದಿನ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಭಾರತ ಉದಯೋನ್ಮುಖ ಆಟಗಾರ ಶುಭ್ ಮನ್ ಗಿಲ್ ಪದಾರ್ಪಣೆ ಮಾಡಿದ್ದಾರೆ. 
ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಶುಭ್ ಮನ್ ಗಿಲ್ ಕೊನೆಗೂ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಪದಾರ್ಪಣೆ ಮಾಡಿದ್ದು, ಹ್ಯಾಮಿಲ್ಟನ್ ನಲ್ಲಿ ನಡೆಯುತ್ತಿರುವ 4ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಕಳೆದ ಆಸ್ಟ್ರೇಲಿಯಾ ಪ್ರವಾಸದ ವೇಳೆ ಮತ್ತೋರ್ವ ಉದಯೋನ್ಮುಖ ಆಟಗಾರ ಪೃಥ್ವಿ ಶಾ ಗಾಯಗೊಂಡು ತಂಡದ ದಿಂದ ದೂರ ಉಳಿದಾಗಲೇ ಶುಭ್ ಮನ್ ಗಿಲ್ ಕಣಕ್ಕಿಳಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. 
ಇದೀಗ 4ನೇ ಏಕದಿನ ಪಂದ್ಯದಲ್ಲಿ ಗಿಲ್ ಪದಾರ್ಪಣೆ ಮಾಡಿದ್ದಾರೆ. ಇನ್ನು ಈ ಏಕದಿನ ಸರಣಿಯನ್ನು ಭಾರತ ಈಗಾಗಲೇ 3-0 ಅಂತರದಲ್ಲಿ ಜಯಿಸಿದ್ದು, ಈ ಪಂದ್ಯವೂ ಸೇರಿದಂತೆ ಮುಂದಿನ ಪಂದ್ಯಗಳು ಭಾರತ ತಂಡದ ಬೆಂಚ್ ಸ್ಟ್ರೆಂಥ್ ಪರೀಕ್ಷೆಗೆ ಸಹಾಯಕವಾಗಲಿದೆ. ಇದೇ ಕಾರಣಕ್ಕೆ ಸ್ವತಃ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಉಪ ನಾಯಕ ರೋಹಿತ್ ಶರ್ಮಾ ತಂಡದ ಸಾರಥ್ಯ ವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!