ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿರಬಹುದು ಆದರೆ ತಂಡದ ಆಟಗಾರರು ಅದ್ಭುತವಾಗಿ ಫೀಲ್ಡಿಂಗ್ ಪ್ರದರ್ಶನ ನೀಡಿದ್ದರು. ಅದರಂತೆ ಉತ್ತಮವಾಗಿ ಆಡುತ್ತಿದ್ದ ಆರಂಭಿಕ ಜೋಡಿ ಜೇಸನ್ ರಾಯ್ ಮತ್ತು ಬೇಸ್ಟೋ ಅವರಿಗೆ ಬ್ರೇಕ್ ಹಾಕಿದ್ದೆ ರವೀಂದ್ರ ಜಡೇಜಾ.
ಹೌದು, ಬದಲಿ ಆಟಗಾರನಾಗಿ ಫೀಲ್ಡಿಂಗ್ ಮಾಡುತ್ತಿದ್ದ ರವೀಂದ್ರ ಜಡೇಜಾ ಅವರು ಕುಲದೀಪ್ ಯಾದವ್ ಬೌಲಿಂಗ್ ನಲ್ಲಿ ಜೇಸನ್ ರಾಯ್ ಬಾರಿಸಿದ ಚೆಂಡನ್ನು ಬೌಂಡರಿ ಲೈನ್ ನಲ್ಲಿ ಡೈವ್ ಮಾಡಿ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಂಗ್ಲೆಂಡ್ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ 337 ರನ್ ಪೇರಿಸಿತ್ತು. 338 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 306 ರನ್ ಬಾರಿಸಿ 31 ರನ್ ಗಳಿಂದ ಸೋಲು ಕಂಡಿದೆ.