ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ನಿನ್ನೆ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ವಿಶ್ವಕಪ್ ಇತಿಹಾಸದಲ್ಲೇ ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ.
ಎಡ್ಜ್ ಬಾಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 31 ರನ್‌ಗಳಿಂದ ಸೋಲು ಅನುಭವಿಸಿದರೂ ಟೀಮ್ ಇಂಡಿಯಾ ನಾಯಕ ಅರ್ಧ ಶತಕ ಸಿಡಿಸುವ ಮೂಲಕ ವಿಶ್ವ ಕ್ರಿಕೆಟ್ ನಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಭಾನುವಾರದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 76 ಎಸೆತಗಳಲ್ಲಿ 66 ರನ್ ಗಳಿಸಿದರು. ಆ ಮೂಲಕ ಐಸಿಸಿ ವಿಶ್ವಕಪ್ ಪ್ರಸಕ್ತ ಆವೃತ್ತಿಯಲ್ಲಿ ಸತತ ಐದು ಅರ್ಧ ಶತಕ ಪೂರೈಸಿದರು. ವಿಶ್ವಕಪ್ ಇತಿಹಾಸದಲ್ಲಿ ಸತತ ಐದು ಅರ್ಧ ಶತಕ ಸಿಡಿಸಿದ ವಿಶ್ವದ ಎರಡನೇ ಬ್ಯಾಟ್ಸ್ ಮನ್ ಎಂಬ ಸಾಧನೆಯನ್ನು ರನ್ ಮಿಷನ್ ಕೊಹ್ಲಿ ಮಾಡಿದರು. 2015ರ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ತಂಡದ ಸ್ಟೀವ್ ಸ್ಮಿತ್ ಸತತ ಐದು ಅರ್ಧ ಶತಕ ಸಿಡಿಸಿ ಮೊದಲ ಸ್ಥಾನದಲ್ಲಿದ್ದಾರೆ.
ಅಲ್ಲದೇ, ಇಂಗ್ಲೆಂಡ್ ವಿರುದ್ಧ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಬ್ಯಾಟ್ಸ್ ಮನ್ ಎಂಬ ಸಾಧನೆಯನ್ನು ವಿರಾಟ್ ಕೊಹ್ಲಿ ಮಾಡಿದರು. ಆ ಮೂಲಕ ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದರು. ರಾಹುಲ್ ದ್ರಾವಿಡ್ ಇಂಗ್ಲೆಂಡ್ ವಿರುದ್ಧ 1,238 ರನ್ ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics