ಬರ್ಮಿಂಗ್ ಹ್ಯಾಮ್: ವಿಶ್ವಕಪ್ ನಲ್ಲಿ ಅಜೇಯ ಓಟ ಮುಂದುವರೆಸಿದ್ದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿ 31 ರನ್ ಗಳಿಂ ಸೋಲು ಕಂಡಿದ್ದು ಇದಕ್ಕೆ ಆಕ್ರೋಶಗೊಂಡಿರುವ ನೆಟಿಗರು ಎಂಎಸ್ ಧೋನಿ ವಿರುದ್ಧ ಹರಿಹಾಯ್ದಿದ್ದಾರೆ.
ಕೊನೆಯಲ್ಲಿ ಓವರ್ ಗೆ ಹತ್ತು ರನ್ ಬೇಕಿದ್ದಾಗಲು ಎಂಎಸ್ ಧೋನಿ ಅವರು ಸಿಂಗಲ್ಸ್ ಗಳನ್ನು ತೆಗೆದುಕೊಳ್ಳುತ್ತಿದ್ದರು. ಇದರಿಂದ ಪಂದ್ಯಕ್ಕೆ ಹಿನ್ನಡೆಯಾಯಿತು. ಅಂತಿಮ ಓವರ್ ಗಳಲ್ಲಿ ಮೈ ಚಳಿ ಬಿಟ್ಟು ಬ್ಯಾಟ್ ಬೀಸಿದ್ದರೆ ಗೆಲುವು ಸಾಧ್ಯವಾಗಿರುತ್ತಿತ್ತು. ಆದರೆ ಧೋನಿ ಮಾತ್ರ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದಾರೆ ಎಂದು ನೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂಡೆದೆ ಕೇದಾರ್ ಜಾಧವ್ ಸಹ ಭರ್ಜರಿ ಹೊಡೆತಕ್ಕೆ ಮುಂದಾಗದ್ದಕ್ಕೆ ಕಿಡಿಕಾರಿರುವ ನೆಟಿಗರು ಎಂಎಸ್ ಧೋನಿ ಮತ್ತು ಕೇದಾರ್ ಜಾದವ್ ಇಬ್ಬರು ಗೆಲುವಿನ ಪ್ರಯತ್ನವನ್ನೇ ಮಾಡಲಿಲ್ಲ ಎಂದು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಇನ್ನು ಕೆಲವರು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಯಾಕೆ ಇನ್ನೂ ಧೋನಿಯನ್ನು ತಲೆ ಮೇಲೆ ಹೊತ್ತು ತಿರುಗುತ್ತಿದ್ದಾರೋ ಎಂದು ಆಕ್ರೋಶ ಹೊರಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics