ಸಂಗ್ರಹ ಚಿತ್ರ 
ಕ್ರಿಕೆಟ್

ವಿಶ್ವಕಪ್ 2019: ಬುಮ್ರಾ ಮ್ಯಾಜಿಕ್, ಭಾರತಕ್ಕೆ ಗೆಲ್ಲಲು 265 ರನ್ ಗುರಿ

ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ ಪ್ರೀತ್ ಬುಮ್ರಾ ದಾಳಿಗೆ ಲಂಕಾ ಬ್ಯಾಟ್ಸ್ ಮನ್ ಗಳು ಪತರಗುಟ್ಟಿದ್ದು 264 ರನ್ ಗಳಿಗೆ ಪತನಗೊಂಡಿದ್ದಾರೆ.

ಲಂಡನ್: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ ಪ್ರೀತ್ ಬುಮ್ರಾ ದಾಳಿಗೆ ಲಂಕಾ ಬ್ಯಾಟ್ಸ್ ಮನ್ ಗಳು ಪತರಗುಟ್ಟಿದ್ದು 264 ರನ್ ಗಳಿಗೆ ಪತನಗೊಂಡಿದ್ದಾರೆ.
ಲೀಡ್ಸ್ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಮಾಡಿದ ಶ್ರೀಲಂಕಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 264 ರನ್ ಪೇರಿಸಿದ್ದು ಟೀಂ ಇಂಡಿಯಾಗೆ ಗೆಲ್ಲಲು 265 ರನ್ ಗುರಿ ನೀಡಿದೆ. 
ಲಂಕಾ ಪರ ಮ್ಯಾಥ್ಯೂಸ್ 113, ತಿರುಮನೆ 53, ಡಿ ಸಿಲ್ವಾ ಅಜೇಯ 29 ಮತ್ತು ಫರ್ನಾಂಡೋ 20 ರನ್ ಗಳಿಸಿದ್ದಾರೆ. 
ಭಾರತ ಪರ ಬೌಲಿಂಗ್ ನಲ್ಲಿ ಜಸ್ ಪ್ರೀತ್ ಬುಮ್ರಾ 3, ಭುವನೇಶ್ವರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಮತ್ತು ಕುಲದೀಪ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?