ಕ್ರಿಕೆಟ್

ರೋಹಿತ್ ಭರ್ಜರಿ ಶತಕ, ವಿಶ್ವಕಪ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ಹಿಟ್ ಮ್ಯಾನ್

Lingaraj Badiger
ಲೀಡ್ಸ್: ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್ ಫಾರ್ಮ್ ಮುಂದುವರಿಸಿರುವ ಹಿಟ್ ಮ್ಯಾನ್ ಖ್ಯಾತಿಯ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ದಾಖಲಿಸುವ ಮೂಲಕ ವಿಶ್ವಕಪ್ ನಲ್ಲಿ ಐದು ಶತಕ ದಾಖಲಿಸಿದ ಮೊದಲ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ. ಅಲ್ಲದೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ನಂತರ ವಿಶ್ವಕಪ್ ನಲ್ಲಿ 600ಕ್ಕೂ ಹೆಚ್ಚು ರನ್‌ ಗಳಿಸಿದ ಎರಡನೇ ಭಾರತೀಯ ಎಂಬ ದಾಖಲೆ ಬರೆದಿದ್ದಾರೆ.
ರೋಹಿ ಶರ್ಮಾ ಅವರು ಪ್ರಸಕ್ತ ಸಾಲಿನ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ಶಕಿಬ್ ಅಲ್ ಹಸನ್ ಬಳಿಕ 600 ರನ್ ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಎಂದೆನಿಸಿಕೊಂಡಿದ್ದಾರೆ. 
ಏಕದಿನ ವಿಶ್ವಕಪ್‌ವೊಂದರಲ್ಲಿ 600ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ನಾಲ್ಕನೇ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೂ ರೋಹಿತ್ ಶರ್ಮಾ ಪಾತ್ರವಾಗಿದ್ದು, 2003ರ ವಿಶ್ವಕಪ್‌ನಲ್ಲಿ ಮಾಜಿ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ 673 ರನ್ ಪೇರಿಸಿದ್ದರು.
SCROLL FOR NEXT