ಕ್ರಿಕೆಟ್

ಅಂಡರ್ 19 ವಿಶ್ವಕಪ್ ಸೆಮಿಫೈನಲ್ಸ್ ನಲ್ಲೂ ಮುಖಾಮುಖಿಯಾಗಿದ್ದರು ವಿರಾಟ್-ಕೇನ್

Lingaraj Badiger
ಮ್ಯಾಂಚೆಸ್ಟರ್: ಐಸಿಸಿ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ಸ್ ನಲ್ಲಿ ಮುಖಾಮುಖಿ ಆಗಲಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್, 11 ವರ್ಷಗಳ ಹಿಂದೆ 2008ರಲ್ಲಿ ನಡೆದ ಅಂಡರ್ 19 ವಿಶ್ವಕಪ್ ಸೆಮಿಫೈನಲ್ ನಲ್ಲೂ ಉಭಯ ತಂಡಗಳ ನಾಯಕರಾಗಿ ಕಾದಾಟ ನಡೆಸಿದ್ದಾರೆ.
ವಿರಾಟ್ ಹಾಗೂ ಕೇನ್ ಅಂಡರ್ 19 ವಿಶ್ವಕಪ್ ನಲ್ಲಿ ತಮ್ಮ ತಮ್ಮ ತಂಡದ ಪರ ನಾಯಕರಾಗಿ ಕಣಕ್ಕೆ ಇಳಿದಿದ್ದರು. ವಿಶೇಷ ಎಂದರೆ ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್ ಗಳಾದ ವಿರಾಟ್ ಹಾಗೂ ವಿಲಿಯಮ್ಸನ್ ಮತ್ತೊಮ್ಮೆ ತಮ್ಮ ತಮ್ಮ ತಂಡವನ್ನು ಮಹಾ ಟೂರ್ನಿಯಲ್ಲಿ ಮುನ್ನಡೆಸಲಿದ್ದಾರೆ.
ವಿರಾಟ್ ಕೊಹ್ಲಿ ಮುಂದಾಳತ್ವದ ತಂಡ, ಅಂಡರ್ 19 ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ತಂಡವನ್ನು ಇನ್ನು ಒಂಬತ್ತು ಎಸೆತಗಳು ಬಾಕಿ ಇರುವಂತೆ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಮಣಿಸಿ, ಫೈನಲ್ ಗೆ ಅರ್ಹತೆ ಪಡೆದು ಪ್ರಶಸ್ತಿಯನ್ನು ಎತ್ತಿತ್ತು. ಅಲ್ಲದೆ ಈ ಪಂದ್ಯದಲ್ಲಿ ಆಲ್ ರೌಂಡರ್ ಪ್ರದರ್ಶನ ತೋರಿದ್ದ ವಿರಾಟ್ ಕೊಹ್ಲಿ ವಿಲಿಯಮ್ಸನ್ ವಿಕೆಟ್ ಪಡೆಯುವ ಮೂಲಕ ತಂಡದ ಗೆಲುವಿಗೆ ಕಾರಣರಾಗಿದ್ದರು.
ಅಂದು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಿಂಚಿದ್ದ ವಿರಾಟ್ ಕೊಹ್ಲಿ, ಏಳು ಓವರ್ ಬೌಲಿಂಗ್ ಮಾಡಿ ಕೇವಲ 27 ರನ್ ನೀಡಿ, ಎರಡು ಪ್ರಮುಖ ವಿಕೆಟ್ ಕಬಳಿಸಿದ್ದರು.
SCROLL FOR NEXT