ಸಂಗ್ರಹ ಚಿತ್ರ 
ಕ್ರಿಕೆಟ್

ಭಾರತ-ನ್ಯೂಜಿಲ್ಯಾಂಡ್ ಸೆಮೀಸ್ ಪಂದ್ಯ ಮಳೆಯಿಂದ ರದ್ದಾದರೆ? ಫೈನಲ್‌ಗೇರಲು ಟೀಂ ಇಂಡಿಯಾಗೀದಿಯಾ ಛಾನ್ಸ್!

ವಿಶ್ವಕಪ್ ಟೂರ್ನಿ ರೋಚಕ ಘಟ್ಟಕ್ಕೆ ಬಂದು ತಲುಪಿದ್ದು ನಾಳೆ ಟೀಂ ಇಂಡಿಯಾ-ನ್ಯೂಜಿಲ್ಯಾಂಡ್ ನಡುವೆ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದ್ದು ಮಳೆಯಿಂದ ಪಂದ್ಯ ರದ್ದಾದರೆ...

ಲಂಡನ್: ವಿಶ್ವಕಪ್ ಟೂರ್ನಿ ರೋಚಕ ಘಟ್ಟಕ್ಕೆ ಬಂದು ತಲುಪಿದ್ದು ನಾಳೆ ಟೀಂ ಇಂಡಿಯಾ-ನ್ಯೂಜಿಲ್ಯಾಂಡ್ ನಡುವೆ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದ್ದು ಮಳೆಯಿಂದ ಪಂದ್ಯ ರದ್ದಾದರೆ ಫೈನಲ್ ಗೆ ಭಾರತ ನೇರವಾಗಿ ತಲುಪಬಹುದೇ ಇಲ್ಲಿದೆ ಮಾಹಿತಿ.
ನಾಳಿನ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಬಹುದು. ಇದೊಂದು ಆತಂಕ ಉಭಯ ತಂಡಗಳಿಗೂ ಎದುರಾಗಿದೆ. ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ ಎಂದು ಏನಾಗುತ್ತದೆ ಎಂಬ ಆತಂಕ ಸೃಷ್ಟಿ ಮಾಡಿದೆ. 
ಭಾರತ-ನ್ಯೂಜಿಲ್ಯಾಂಡ್ ನಡುವಿನ ಸೆಮಿಫೈನಲ್ ಪಂದ್ಯಕ್ಕೆ ಮಳೆಯ ಮುನ್ಸೂಚನೆ ಇರುವುದು ಅಭಿಮಾನಿಗಳ ಉತ್ಸಾಹವನ್ನು ಕುಗ್ಗಿಸಬಹುದು. ಪಂದ್ಯ ಮಳೆಯಿಂದ ರದ್ದಾದರೆ ಅದಕ್ಕೂ ಮೀಸಲು ದಿನವಿದೆ. ಅದು ಬುಧವಾರವೂ ನಡೆಯಬಹುದು. 
ಇನ್ನು ಮೀಸಲು ದಿನವೂ ಪಂದ್ಯ ಮಳೆಯಿಂದ ರದ್ದಾದರೆ ಅಂಕಪಟ್ಟಿಯಲ್ಲಿ 15 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಫೈನಲ್ ಗೆ ನೇರವಾಗಿ ಪ್ರವೇಶಿಸಬಹುದು. ಇನ್ನು 11 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್ ಫೈನಲ್ ಗೇರುವ ಅವಕಾಶದಿಂದ ವಂಚಿತವಾಗಬಹುದು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ