ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ಕಿವೀಸ್ ವಿರುದ್ಧ ಮೊದಲ ಸೆಮಿ ಫೈನಲ್ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯಾಗೆ ಗಾಯ!

Srinivasamurthy VN
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಇಂದು ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ತಂಡದ ಪ್ರಮುಖ ಆಟಗಾರ ಹಾರ್ದಿಕ್ ಪಾಂಡ್ಯಾ ಗಾಯದ ಸಮಸ್ಯೆಗೆ ತುತ್ತಾಗಿ ಆತಂಕ ಮೂಡಿಸಿದ್ದರು.
ಇಂದು ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಬೌಲಿಂಗ್ ಮಾಡುವ ವೇಳೆ ಹಾರ್ದಿಕ್ ಪಾಂಡ್ಯಾ ಗಾಯದ ಸಮಸ್ಯೆಗೆ ತುತ್ತಾಗಿದ್ದರು.
ನ್ಯೂಜಿಲೆಂಡ್ ಇನ್ನಿಂಗ್ಸ್ ನ 16ನೇ ಓವರ್ ನ ವೇಳೆ ಹಾರ್ದಿಕ್ ಪಾಂಡ್ಯ  ತೊಡೆಸಂದು ಸ್ನಾಯು ಸೆಳೆತಕ್ಕೆ ತುತ್ತಾಗಿದ್ದರು. ಕೂಡಲೇ ಅವರನ್ನು ಪೆವಿಲಿಯನ್ ಗೆ ಕಳುಹಿಸಿದ ನಾಯಕ ಕೊಹ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದರು. ಬಳಿಕ ಡ್ರೆಸಿಂಗ್ ರೂಂಗೆ ತೆರಳಿದ ಪಾಂಡ್ಯಾರನ್ನು ತಂಡದ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್ ಚಿಕಿತ್ಸೆಗೊಳಪಡಿಸಿದರು.
ಆ ಬಳಿಕ ಸುಮಾರು 4 ಓವರ್ ಗಳಷ್ಟು ಸಮಯ ಪಾಂಡ್ಯಾ ವಿಶ್ರಾಂತಿ ಪಡೆದು, ಮತ್ತೆ ಮೈದಾನಕ್ಕೆ ಆಗಮಿಸಿದರು. ಈ ವೇಳೆ ಅಭಿಮಾನಿಗಳಲ್ಲಿನ ಆತಂಕ ದೂರವಾಯಿತು.
SCROLL FOR NEXT